ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಟಕ್‌ ಬ್ಯಾಂಕ್‌ಗೆ ₹4,133 ಕೋಟಿ ಲಾಭ

Published 4 ಮೇ 2024, 13:40 IST
Last Updated 4 ಮೇ 2024, 13:40 IST
ಅಕ್ಷರ ಗಾತ್ರ

ನವದೆಹಲಿ: 2023–24ನೇ ಆರ್ಥಿಕ ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ ಕೋಟಕ್‌ ಮಹೀಂದ್ರ ಬ್ಯಾಂಕ್‌, ಒಟ್ಟು ₹4,133 ಕೋಟಿ ನಿವ್ವಳ ಲಾಭಗಳಿಸಿದೆ.

ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹3,496 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಲಾಭದಲ್ಲಿ ಶೇ 18ರಷ್ಟು ಏರಿಕೆಯಾಗಿದೆ. ಕೊನೆಯ ತ್ರೈಮಾಸಿಕದಲ್ಲಿ ₹15,285 ಕೋಟಿ ವರಮಾನಗಳಿಸಲಾಗಿದೆ ಎಂದು ಬ್ಯಾಂಕ್‌, ಷೇರುಪೇಟೆಗೆ ಮಾಹಿತಿ ನೀಡಿದೆ.

2022–23ನೇ ಪೂರ್ಣ ಆರ್ಥಿಕ ವರ್ಷದಲ್ಲಿ ಬ್ಯಾಂಕ್‌ ₹10,939 ಕೋಟಿ ನಿವ್ವಳ ಲಾಭಗಳಿಸಿತ್ತು. 2023–24ರಲ್ಲಿ ₹13,782 ಕೋಟಿ ಗಳಿಸಿದೆ. ಒಟ್ಟಾರೆ ಲಾಭದಲ್ಲಿ ಶೇ 26ರಷ್ಟು ಏರಿಕೆಯಾಗಿದೆ. ವಾರ್ಷಿಕ ವರಮಾನವು ₹41,334 ಕೋಟಿಯಿಂದ ₹56,072 ಕೋಟಿಗೆ ತಲುಪಿದೆ. 

ವಾರ್ಷಿಕ ನಿವ್ವಳ ಬಡ್ಡಿ ವರಮಾನದಲ್ಲಿ ಶೇ 21ರಷ್ಟು ಏರಿಕೆಯಾಗಿದೆ. ₹21,552 ಕೋಟಿಯಿಂದ ₹25,993 ಕೋಟಿ ಆಗಿದೆ. ಮಾರ್ಚ್‌ ತ್ರೈಮಾಸಿಕದಲ್ಲಿ ನಿವ್ವಳ ವರಮಾನವು ಶೇ 13ರಷ್ಟು ಹೆಚ್ಚಳವಾಗಿದ್ದು, ₹6,909 ಕೋಟಿ ಗಳಿಸಿದೆ. 

ಬ್ಯಾಂಕ್‌ನ ವಸೂಲಾಗದ ಸಾಲದ ಸರಾಸರಿ ಪ್ರಮಾಣವು (ಎನ್‌ಪಿಎ) ಶೇ 1.39ರಷ್ಟಿದ್ದರೆ, ನಿವ್ವಳ ಎನ್‌ಪಿಎ ಶೇ 0.34ರಷ್ಟಿದೆ. ₹5 ಮುಖಬೆಲೆಯ ಪ್ರತಿ ಈಕ್ವಿಟಿ ಷೇರಿಗೆ ₹2 ಲಾಭಾಂಶ ನೀಡಲು ಆಡಳಿತ ಮಂಡಳಿಯು ಶಿಫಾರಸು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT