ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮವು (ಕೆಪಿಸಿಎಲ್) 2025-26ನೇ ಸಾಲಿನಲ್ಲಿ 15,509 ದಶಲಕ್ಷ ಯೂನಿಟ್ ಜಲ ವಿದ್ಯುತ್ ಉತ್ಪಾದಿಸುವ ಮೂಲಕ ದಾಖಲೆ ಮಾಡಿದೆ.

ಕೇಂದ್ರ ಅಂಕಿ–ಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ ವರದಿಯ ಪ್ರಕಾರ 2025-26ನೇ ಸಾಲಿನಲ್ಲಿ ಕೆಪಿಸಿಎಲ್ 3.63 ಗಿಗಾವಾಟ್ ವಿದ್ಯುತ್ನೊಂದಿಗೆ ಜಲ ವಿದ್ಯುತ್ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ. ಶರಾವತಿ ಕಣಿವೆಯಲ್ಲಿ ನಾಲ್ಕು, ಕಾಳಿ ಕಣಿವೆಯ ನಾಲ್ಕು, ವಾರಾಹಿ ಕಣಿವೆ ಮತ್ತು ಕಾವೇರಿ ಕಣಿವೆಯ ತಲಾ ಎರಡು, ಕೃಷ್ಣಾ ಮತ್ತು ತುಂಗಭದ್ರಾ ನದಿಗಳಲ್ಲಿ ತಲಾ ಒಂದು ವಿದ್ಯುತ್ ಉತ್ಪಾದನಾ ಸ್ಥಾವರಗಳಲ್ಲಿ 15,509 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆಯಾಗಿದೆ. 2024-25ನೇ ಸಾಲಿನಲ್ಲಿ 13,853 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದಿಸಿರುವುದು ಇದುವರೆಗಿನ ದಾಖಲೆಯಾಗಿತ್ತು.

‘ಕೆಪಿಸಿಎಲ್ ರಾಜ್ಯದ ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಶ್ರಮಿಸುತ್ತಿದೆ. ಶಿವನಸಮುದ್ರ, ಶಿಂಷಾ, ಶರಾವತಿ ಹಾಗೂ ಮಹಾತ್ಮ ಗಾಂಧಿ ಜಲ ವಿದ್ಯುತ್ ಕೇಂದ್ರದ ಕೆಲವು ಘಟಕಗಳು ರಾಜ್ಯದ ಅತ್ಯಂತ ಹಳೆಯ ಜಲವಿದ್ಯುತ್ ಕೇಂದ್ರಗಳಾಗಿದ್ದರೂ, ಈ ಘಟಕಗಳ ಕಾರ್ಯಕ್ಷಮತೆ ಗಮನಾರ್ಹವಾಗಿದೆ. ಉತ್ತಮ ನಿರ್ವಹಣೆಯಿಂದ ಹೆಚ್ಚು ವಿದ್ಯುತ್ ಉತ್ಪಾದನೆ ಸಾಧ್ಯವಾಗಿದೆ’ ಎಂದು ಕೆಪಿಸಿಎಲ್ನ ವ್ಯವಸ್ಥಾಪಕ ನಿರ್ದೇಶಕರೂ ಆಗಿರುವ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ತಿಳಿಸಿದ್ದಾರೆ. ‘ಕಳೆದ ವರ್ಷ ಹೆಚ್ಚು ಮಳೆ ಬಿದ್ದಿರುವುದರ ಜತೆಗೆ ವಿದ್ಯುತ್ ಸ್ಥಾವರಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಿರುವುದರಿಂದ ರಾಜ್ಯದ ಜಲ ವಿದ್ಯುತ್ ಸ್ಥಾವರಗಳಲ್ಲಿ ದಾಖಲೆಯ ವಿದ್ಯುತ್ ಉತ್ಪಾದನೆಯಾಗಿದೆ’ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-51-1890042023

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.