ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಸ್‌ ಗೋಪಾಲಕೃಷ್ಣನ್ ಆರ್‌ಬಿಐ ನಾವಿನ್ಯತಾ ಕೇಂದ್ರದ ಅಧ್ಯಕ್ಷ

Last Updated 17 ನವೆಂಬರ್ 2020, 13:35 IST
ಅಕ್ಷರ ಗಾತ್ರ

ಮುಂಬೈ: ಭಾರತೀಯ ರಿಸರ್ವ್‌ ಬ್ಯಾಂಕ್‌ನ (ಆರ್‌ಬಿಐ) ನಾವೀನ್ಯತಾ ಕೇಂದ್ರದ ಮೊದಲ ಅಧ್ಯಕ್ಷರನ್ನಾಗಿ ಇನ್ಫೊಸಿಸ್‌ ಸಹ ಸಂಸ್ಥಾಪಕ ಕ್ರಿಸ್‌ ಗೋಪಾಲಕೃಷ್ಣನ್‌ ಅವರನ್ನು ನೇಮಕ ಮಾಡಲಾಗಿದೆ.

ನಾವೀನ್ಯತಾ ಕೇಂದ್ರವನ್ನು ಆರಂಭಿಸುವುದಾಗಿ ಆರ್‌ಬಿಐ ಆಗಸ್ಟ್‌ನಲ್ಲಿ ಪ್ರಕಟಿಸಿತ್ತು. ತಂತ್ರಜ್ಞಾನವನ್ನು ಬಳಸಿಕೊಂಡು ಹಣಕಾಸು ವಲಯದಲ್ಲಿ ಹೊಸತನವನ್ನು ತರುವುದು ಈ ಕೇಂದ್ರದ ಉದ್ದೇಶ.

ಹಣಕಾಸು ಸೇವೆಗಳು ಮತ್ತು ಹಣಕಾಸು ಉತ್ಪನ್ನಗಳ ಬಳಕೆಯನ್ನು ಉತ್ತೇಜಿಸುವ ವ್ಯವಸ್ಥೆಯೊಂದನ್ನು ಸೃಷ್ಟಿಸುವುದು ನಾವೀನ್ಯತಾ ಕೇಂದ್ರ ಸ್ಥಾಪನೆಯ ಉದ್ದೇಶ. ಇದು ಆರ್ಥಿಕ ಒಳಗೊಳ್ಳುವಿಕೆಯನ್ನು ಪ್ರೋತ್ಸಾಹಿಸುವ ಕೆಲಸ ಕೂಡ ಮಾಡಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT