ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌ಆ್ಯಂಡ್‌ಟಿ ಲಾಭ ಏರಿಕೆ

Last Updated 26 ಜುಲೈ 2022, 14:06 IST
ಅಕ್ಷರ ಗಾತ್ರ

ನವದೆಹಲಿ: ಎಲ್‌ಆ್ಯಂಡ್‌ಟಿ ಕಂಪನಿಯ ಜೂನ್‌ ತ್ರೈಮಾಸಿಕದ ನಿವ್ವಳ ಲಾಭವು ಶೇಕಡ 44.9ರಷ್ಟು ಹೆಚ್ಚಾಗಿದ್ದು, ₹ 1,702 ಕೋಟಿಗೆ ತಲುಪಿದೆ. ಕಂಪನಿಯು ಕಾರ್ಯಾಚರಣೆಯಲ್ಲಿ ಹೆಚ್ಚಿನ ಆದಾಯ ಸಂಗ್ರಹಿಸಲು ಸಾಧ್ಯವಾದ ಕಾರಣ ಲಾಭದ ಪ್ರಮಾಣ ಜಾಸ್ತಿಯಾಗಿದೆ.

ಹಿಂದಿನ ವರ್ಷದ ಇದೇ ಅವಧಿಯಲ್ಲಿ ಕಂಪನಿಯು ₹ 1,174 ಕೋಟಿ ನಿವ್ವಳ ಲಾಭ ಕಂಡಿತ್ತು.

ಏಪ್ರಿಲ್–ಜೂನ್ ಅವಧಿಯಲ್ಲಿ ಕಂಪನಿಯು ಕಾರ್ಯಾಚರಣೆಗಳಿಂದ ಒಟ್ಟು ₹ 35 ಸಾವಿರ ಕೋಟಿ ಆದಾಯ ಗಳಿಸಿದೆ. ಇದು ಹಿಂದಿನ ವರ್ಷದ ಇದೇ ಅವಧಿಯಲ್ಲಿ ₹ 29 ಸಾವಿರ ಕೋಟಿ ಆಗಿತ್ತು ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT