ನವದೆಹಲಿ: ಗಿಗ್ ಮತ್ತು ಆನ್ಲೈನ್ ವೇದಿಕೆಯಡಿ ಕೆಲಸ ನಿರ್ವಹಿಸುವ ಕಾರ್ಮಿಕರು ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿ (ಎಬಿ–ಪಿಎಂಜೆಎವೈ) ಸೌಲಭ್ಯ ಪಡೆಯಲು ಇ–ಶ್ರಮ್ ಪೋರ್ಟಲ್ನಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ಕೇಂದ್ರ ಕಾರ್ಮಿಕ ಸಚಿವಾಲಯ ತಿಳಿಸಿದೆ.

ಟ್ಯಾಕ್ಸಿ, ಆಹಾರ ವಿತರಣೆ, ಸರಕು ಸಾಗಣೆ ಮತ್ತು ವೃತ್ತಿಪರ ಸೇವಾ ವಲಯದಲ್ಲಿ ಹೊಸ ಉದ್ಯೋಗಗಳು ಸೃಷ್ಟಿಯಾಗುತ್ತಿದ್ದು, ಗಿಗ್ ಮತ್ತು ಆನ್ಲೈನ್ ವೇದಿಕೆಯ ಆರ್ಥಿಕತೆಯು ವಿಸ್ತರಣೆಗೊಳ್ಳುತ್ತಿದೆ ಎಂದು ಸಚಿವಾಲಯ ಹೇಳಿದೆ.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಗಿಗ್ ವಲಯದಲ್ಲಿ ದುಡಿಯುವ ಕಾರ್ಮಿಕರ ಸಂಖ್ಯೆ 1 ಕೋಟಿಗೆ ತಲುಪಲಿದೆ. 2029–30ರ ವೇಳೆಗೆ ಈ ಸಂಖ್ಯೆಯು 2.35 ಕೋಟಿಗೆ ತಲುಪಲಿದೆ ಎಂದು ನೀತಿ ಆಯೋಗವು ಅಂದಾಜಿಸಿದೆ.

ಗಿಗ್ ಕಾರ್ಮಿಕರಿಗೆ ಅನುಕೂಲ ಕಲ್ಪಿಸುವ 2025–26ನೇ ಸಾಲಿನ ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ. ಕಾರ್ಮಿಕರಿಗೆ ಗುರುತಿನ ಚೀಟಿ ನೀಡುವುದಾಗಿ ಸರ್ಕಾರ ಹೇಳಿದೆ. ಅಲ್ಲದೆ, ಎಬಿ–ಪಿಎಂಜೆಎವೈ ಅಡಿ ಪ್ರತಿ ಕುಟುಂಬಕ್ಕೆ ₹5 ಲಕ್ಷ ಆರೋಗ್ಯ ವಿಮಾ ಸೌಲಭ್ಯ ನೀಡುವುದಾಗಿ ತಿಳಿಸಿದೆ.

ದೇಶದಾದ್ಯಂತ ಸರ್ಕಾರಿ ಮತ್ತು ಯೋಜನೆಯಡಿ ನೋಂದಾಯಿಸಿರುವ ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಮಿಕರ ಕುಟುಂಬಗಳಿಗೆ ಚಿಕಿತ್ಸಾ ಸೌಲಭ್ಯ ದೊರೆಯಲಿದೆ. ಇದನ್ನು ಪಡೆಯಲು ಕಾರ್ಮಿಕರು ಇ–ಶ್ರಮ್ ಪೋರ್ಟಲ್ನಡಿ ಹೆಸರು ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ಸಚಿವಾಲಯ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.