ಬುಧವಾರ, ಜೂನ್ 23, 2021
30 °C

ವಿಡಿಎ ಹೆಚ್ಚಳ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರ ಸರ್ಕಾರದ ಅಧೀನದ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕುಶಲ ಕಾರ್ಮಿಕರು ಮತ್ತು ಕೌಶಲರಹಿತ ಕಾರ್ಮಿಕರ ವಿಡಿಎ ಮೊತ್ತವನ್ನು ಹೆಚ್ಚಳ ಮಾಡುವುದಾಗಿ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಶುಕ್ರವಾರ ಪ್ರಕಟಿಸಿದೆ. ಈ ಹೆಚ್ಚಳವು ಪ್ರತಿ ತಿಂಗಳಿಗೆ ₹105ರಿಂದ ₹210ರವರೆಗೆ ಇರಲಿದೆ.

ಇದರಿಂದ ಒಂದೂವರೆ ಕೋಟಿಗೂ ಹೆಚ್ಚಿನ ನೌಕರರಿಗೆ ಪ್ರಯೋಜನ ಆಗಲಿದೆ. ಈ ಹೆಚ್ಚಳವು ಏಪ್ರಿಲ್‌ 1ರಿಂದ ಅನ್ವಯ ಆಗಲಿದೆ. ಕೇಂದ್ರ ಸರ್ಕಾರದ ಅಧೀನದ ಸಂಸ್ಥೆಗಳು, ರೈಲ್ವೆ, ಗಣಿ, ಪ್ರಮುಖ ಬಂದರುಗಳಲ್ಲಿ ಕೆಲಸ ಮಾಡುವವರಿಗೆ ಇದರ ಪ್ರಯೋಜನ ದೊರೆಯಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.