ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಧಾರಣಾ ಕ್ರಮ ಅಗತ್ಯ: ಸಿಂಗ್‌

15ನೆ ಹಣಕಾಸು ಆಯೋಗದ ಅಧ್ಯಕ್ಷರ ಅಭಿಮತ
Last Updated 17 ಮೇ 2019, 18:14 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ‘ಆರ್ಥಿಕ ಬೆಳವಣಿಗೆಗೆ ಉತ್ತೇಜನ ನೀಡಬೇಕಾದರೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿರುವ ಹೊಸ ಸರ್ಕಾರವು ಭೂಮಿ ಮತ್ತು ಕಾರ್ಮಿಕ ಸುಧಾರಣಾ ಕ್ರಮಗಳ ಜಾರಿಗೆ ಒತ್ತು ನೀಡುವ ಅಗತ್ಯ ಇದೆ’ ಎಂದು 15ನೆ ಹಣಕಾಸು ಆಯೋಗದ ಅಧ್ಯಕ್ಷ ಎನ್‌. ಕೆ. ಸಿಂಗ್‌ ಹೇಳಿದ್ದಾರೆ.

‘ದೀರ್ಘಾವಧಿವರೆಗೆ ಆರ್ಥಿಕ ಬೆಳವಣಿಗೆಯನ್ನು ಸ್ಥಿರವಾಗಿ ಕಾಯ್ದುಕೊಳ್ಳಲು ವಿತ್ತೀಯ ವಿವೇಕ ಪಾಲಿಸುವುದು ಮಹತ್ವದ ಕ್ರಮವಾಗಿರಲಿದೆ. ಆರ್ಥಿಕ ಸ್ಥಿರತೆಯು ದೇಶದ ಆರ್ಥಿಕ ವೃದ್ಧಿ ದರವನ್ನು ಗರಿಷ್ಠ ಮಟ್ಟದಲ್ಲಿ ಕಾಯ್ದುಕೊಳ್ಳಲು ಮಹತ್ವದ ಪಾತ್ರ ನಿರ್ವಹಿಸುತ್ತದೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಅಸೋಚಾಂ ಏರ್ಪಡಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT