ಮಂಗಳವಾರ, ಆಗಸ್ಟ್ 16, 2022
20 °C

ಎಲ್‌ಐಸಿ ಲಾಭ ಇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಷೇರುಪೇಟೆಯಲ್ಲಿ ನೋಂದಾಯಿತ ಆದ ನಂತರ ಮೊದಲ ತ್ರೈಮಾಸಿಕ ಫಲಿತಾಂಶ ಪ್ರಕಟಿಸಿರುವ ಭಾರತೀಯ ಜೀವ ವಿಮಾ ನಿಗಮವು (ಎಲ್‌ಐಸಿ), ಮಾರ್ಚ್‌ ತ್ರೈಮಾಸಿಕದಲ್ಲಿ ಲಾಭದ ಪ್ರಮಾಣವು ಶೇಕಡ 17ರಷ್ಟು ಕುಸಿದಿದೆ ಎಂದು ತಿಳಿಸಿದೆ.

ಮಾರ್ಚ್‌ ತ್ರೈಮಾಸಿಕದಲ್ಲಿ ಎಲ್‌ಐಸಿ ₹ 2,409 ಕೋಟಿ ಲಾಭ ಗಳಿಸಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ಎಲ್‌ಐಸಿ ₹ 2,917 ಕೋಟಿ ಲಾಭ ದಾಖಲಿಸಿತ್ತು. ಎಲ್‌ಐಸಿಯು ಷೇರುದಾರರಿಗೆ ಪ್ರತಿ ಷೇರಿಗೆ ₹ 1.50ರಷ್ಟು ಲಾಭಾಂಶ ಪ್ರಕಟಿಸಿದೆ.

ಷೇರು ಮಾರುಕಟ್ಟೆಯಲ್ಲಿ ನೋಂದಾಯಿತ ಆದ ನಂತರದಲ್ಲಿ ಎಲ್‌ಐಸಿ ಷೇರುಗಳ ಮೌಲ್ಯವು ಕುಸಿತ ಕಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು