ಸೋಮವಾರ, ಜೂನ್ 21, 2021
29 °C

ಎಲ್‌ಐಸಿ: ಸೋಮವಾರದಿಂದ ವಾರದಲ್ಲಿ ಐದು ದಿನ ಕೆಲಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾರತೀಯ ಜೀವ ವಿಮಾ ನಿಗಮವು (ಎಲ್‌ಐಸಿ) ಸೋಮವಾರದಿಂದ (ಮೇ 10) ಆರಂಭ ಆಗುವಂತೆ ತನ್ನ ನೌಕರರಿಗೆ ವಾರದಲ್ಲಿ ಐದು ದಿನಗಳ ಕೆಲಸದ ವ್ಯವಸ್ಥೆಯನ್ನು ಜಾರಿಗೆ ತಂದಿದೆ.

ಕೇಂದ್ರ ಸರ್ಕಾರವು ಏಪ್ರಿಲ್‌ 15ರಂದು ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಎಲ್‌ಐಸಿಗೆ ಪ್ರತಿ ಶನಿವಾರ ಸರ್ಕಾರಿ ರಜಾ ದಿನ ಆಗಿರಲಿದೆ. ಹೀಗಾಗಿ ಎಲ್‌ಐಸಿಯ ಎಲ್ಲಾ ಕಚೇರಿಗಳು ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರವೇ ತೆರೆದಿರಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಚಾಲಕರು, ಕಟ್ಟಡ ನಿರ್ವಹಣೆ ಮಾಡುವ ಸಿಬ್ಬಂದಿಯನ್ನು ಹೊರತುಪಡಿಸಿ ಉಳಿದೆಲ್ಲ ನೌಕರರ ಕೆಲಸದ ಅವಧಿಯು ಬೆಳಗ್ಗೆ 10 ರಿಂದ ಸಂಜೆ 5.30ರವರೆಗೆ ಇರಲಿದೆ ಎಂದು ಹೇಳಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು