ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎಲ್‌ಐಸಿ: ಶೀಘ್ರದಲ್ಲೇ 4 ಹೊಸ ಯೋಜನೆ’

Published 23 ನವೆಂಬರ್ 2023, 13:43 IST
Last Updated 23 ನವೆಂಬರ್ 2023, 13:43 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ಜೀವ ವಿಮಾ ನಿಗಮವು (ಎಲ್‌ಐಸಿ) ಪ್ರಸಕ್ತ ಹಣಕಾಸು ವರ್ಷದಲ್ಲಿ ಹೊಸ ಯೋಜನೆಗಳ ಪ್ರೀಮಿಯನಿಂದ (ಕಂತು) ಬರುವ ವರಮಾನದಲ್ಲಿ ಎರಡಂಕಿ ಪ್ರಗತಿ ಸಾಧಿಸಲು ಉದ್ದೇಶಿಸಿದೆ. ಈ ನಿಟ್ಟಿನಲ್ಲಿ ಮುಂಬರುವ ತಿಂಗಳುಗಳಲ್ಲಿ 3–4 ಹೊಸ ಯೋಜನೆಗಳನ್ನು ಬಿಡುಗಡೆ ಮಾಡಲಿದೆ.

ಕಳೆದ ವರ್ಷಕ್ಕಿಂತಲೂ ಹೆಚ್ಚಿನ ಎರಡಂಕಿ ಪ್ರಗತಿ ಸಾಧಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಈಚೆಗೆ ವೈಯಕ್ತಿಕ ರಿಟೇಲ್‌ ವಹಿವಾಟು ಪ್ರಮಾಣ ಹೆಚ್ಚಾಗುತ್ತಿರುವುದನ್ನು ಗಮನಿಸಿದರೆ ಈ ಗುರಿ ಸಾಧಿಸುವ ವಿಶ್ವಾಸ ಇದೆ. ಇದಕ್ಕೆ ಪೂರಕವಾಗಿ ಹೊಸ ಆಕರ್ಷಕ ಯೋಜನೆಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಎಲ್‌ಐಸಿ ಅಧ್ಯಕ್ಷ ಸಿದ್ಧಾರ್ಥ ಮೊಹಂತಿ ತಿಳಿಸಿದ್ದಾರೆ.‌

ಡಿಸೆಂಬರ್ ಮೊದಲ ವಾರದಲ್ಲಿ ಒಂದು ಹೊಸ ಯೋಜನೆ ಬಿಡುಗಡೆ ಮಾಡಲಾಗುವುದು. ಇದು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸುವ ಭರವಸೆ ಇದೆ ಎಂದಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದ ಮೊದಲಾರ್ಧದಲ್ಲಿ ಹೊಸ ಯೋಜನೆಗಳ ಪ್ರೀಮಿಯಂ ವರಮಾನ ವಿಭಾಗವು ಶೇ 2.65ರಷ್ಟು ಬೆಳವಣಿಗೆ ಕಂಡಿದ್ದು ₹25,184 ಕೋಟಿಗೆ ತಲಪಿದೆ. ಹಿಂದಿನ ಹಣಕಾಸು ವರ್ಷದ ಮೊದಲಾರ್ಧದಲ್ಲಿ ₹24,535 ಕೋಟಿ ಇತ್ತು. ಕಂಪನಿಯ ನಿರ್ವಹಣಾ ಸಂಪತ್ತು ಮೌಲ್ಯವು ಸೆಪ್ಟೆಂಬರ್ 30ರ ಅಂತ್ಯಕ್ಕೆ ಶೇ 10.47ರಷ್ಟು ಬೆಳವಣಿಗೆ ಕಂಡು ₹47.43 ಲಕ್ಷ ಕೋಟಿಗೆ ಏರಿಕೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT