ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಂಛನ ದುರ್ಬಳಕೆ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ ಎಲ್‌ಐಸಿ

Last Updated 16 ಡಿಸೆಂಬರ್ 2021, 14:08 IST
ಅಕ್ಷರ ಗಾತ್ರ

ನವದೆಹಲಿ: ಗ್ರಾಹಕರನ್ನು ಆಕರ್ಷಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಲಾಂಛನವನ್ನು ಅಕ್ರಮವಾಗಿ ಬಳಸಿಕೊಳ್ಳುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಗುರುವಾರ ಹೇಳಿದೆ.

ಟ್ವಿಟರ್, ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಮತ್ತು ಯೂಟ್ಯೂಬ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಲಾಂಛನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರು ಕಳುಹಿಸುವ ವಿಮಾ ಪ್ರಸ್ತಾವನೆಗಳಿಗೆ ತುತ್ತಾಗಬಾರದು ಎಂದು ಎಲ್‌ಐಸಿ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

‘ಕೆಲವರು ನಮ್ಮ ಲಾಂಛನ ಹೋಲುವ ಲಾಂಛನ ಬಳಸಿಕೊಂಡು ವೆಬ್‌ಸೈಟ್‌ ಮತ್ತು ಆ್ಯಪ್‌ಗಳನ್ನು ಆರಂಭಿಸಿರುವುದು, ಅವುಗಳ ಮೂಲಕ ವಿಮೆ ಮತ್ತು ವಿಮಾ ಸಲಹೆ ಸೇವೆಗಳನ್ನು ನೀಡುವ ಯತ್ನ ನಡೆಸಿರುವುದು ನಮ್ಮ ಗಮನಕ್ಕೆ ಬಂದಿದೆ. ನಮ್ಮ ವೆಬ್‌ಸೈಟ್‌ ವಿಳಾಸವನ್ನು ಹೋಲುವ ವೆಬ್‌ಸೈಟ್‌ ವಿಳಾಸ ಬಳಸಿಯೂ ಅವರು ಈ ಕೆಲಸ ಮಾಡುತ್ತಿದ್ದಾರೆ’ ಎಂದು ಎಲ್ಐಸಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT