ಮಂಗಳವಾರ, ಸೆಪ್ಟೆಂಬರ್ 22, 2020
26 °C

ಸಾಲ ಮರುಹೊಂದಾಣಿಕೆ: ಸೆ. 15ರೊಳಗೆ ಜಾರಿಗೆ ಸೂಚನೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್‌–19 ಸಾಂಕ್ರಾಮಿಕದ ಪರಿಣಾಮವಾಗಿ, ಸಾಲ ಮರುಪಾವತಿಯಲ್ಲಿ ತೊಂದರೆ ಎದುರಿಸುತ್ತಿರುವವರಿಗೆ ಸಾಲ ಮರುಹೊಂದಾಣಿಕೆಯ ಸೌಲಭ್ಯವನ್ನು ಸೆಪ್ಟೆಂಬರ್‌ 15ಕ್ಕೆ ಮೊದಲು ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬ್ಯಾಂಕುಗಳು ಹಾಗೂ ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ (ಎನ್‌ಬಿಎಫ್‌ಸಿ) ಸೂಚಿಸಿದ್ದಾರೆ.

ನಿರ್ಮಲಾ ಅವರು ಬ್ಯಾಂಕುಗಳು ಹಾಗೂ ಎನ್‌ಬಿಎಫ್‌ಸಿ ಪ್ರತಿನಿಧಿಗಳ ಜೊತೆ ಗುರುವಾರ ಸಭೆ ನಡೆಸಿದರು. ಆಡಳಿತ ಮಂಡಳಿಯಿಂದ ಅನುಮೋದನೆ ಪಡೆದಿರುವ ಸಾಲ ಮರುಹೊಂದಾಣಿಕೆಯ ಸೌಲಭ್ಯವನ್ನು ತಕ್ಷಣ ಕಲ್ಪಿಸಬೇಕು ಎಂದು ಸೂಚಿಸಿದರು. ಸಾಲದ ಕಂತುಗಳ ಮರುಪಾವತಿಗೆ ನೀಡಿದ್ದ ವಿನಾಯಿತಿಯು ಆಗಸ್ಟ್‌ 31ರಂದು ಕೊನೆಗೊಂಡಿದೆ.

ಸಾಲ ಮರುಹೊಂದಾಣಿಕೆಗೆ ಅರ್ಹರಾಗಿರುವ ಸಾಲಗಾರರನ್ನು ಗುರುತಿಸಿ, ಅವರನ್ನು ಸಂಪರ್ಕಿಸುವ ಕೆಲಸ ಆಗಬೇಕು. ಉದ್ಯಮಗಳ ಪುನಶ್ಚೇತನದ ದೃಷ್ಟಿಯಿಂದ, ಸಾಲ ಮರುಹೊಂದಾಣಿಕೆ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಕ್ಕೆ ತರಬೇಕು ಎಂದೂ ಅವರು ಸೂಚಿಸಿದ್ದಾರೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ. ಮರುಹೊಂದಾಣಿಕೆ ಯೋಜನೆಯನ್ನು ಜಾರಿಗೆ ತಂದ ನಂತರ, ಮಾಧ್ಯಮಗಳ ಮೂಲಕ ಅದರ ಬಗ್ಗೆ ನಿರಂತರವಾಗಿ ಮಾಹಿತಿ ಒದಗಿಸಬೇಕು ಎಂದೂ ಸೂಚಿಸಲಾಗಿದೆ.

ತಾವು ಈಗಾಗಲೇ ಸಾಲ ಮರುಹೊಂದಾಣಿಕೆ ಯೋಜನೆಯನ್ನು ಸಿದ್ಧಪಡಿಸಿದ್ದು, ಮರುಹೊಂದಾಣಿಕೆಗೆ ಅರ್ಹರಾಗಿರುವವರನ್ನು ಸಂಪರ್ಕಿಸುವ ಕೆಲಸ ನಡೆದಿದೆ ಎಂದು ಬ್ಯಾಂಕ್ ಪ್ರತಿನಿಧಿಗಳು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು