ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ಡೌನ್ ಪರಿಣಾಮ: ಪೆಟ್ರೋಲ್, ಡಿಸೇಲ್ ಬೇಡಿಕೆಯಲ್ಲಿ ಭಾರೀ ಕುಸಿತ

Last Updated 1 ಜೂನ್ 2021, 8:48 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್19 ಸೋಂಕು ಹರಡುವುದನ್ನು ತಡೆಗಟ್ಟಲು ದೇಶದ ಬಹುತೇಕ ರಾಜ್ಯಗಳಲ್ಲಿ ವಿಧಿಸಲಾಗಿರುವ ಲಾಕ್‌ಡೌನ್‌ ಪರಿಣಾಮವಾಗಿ ಕಳೆದ ಮೇ ತಿಂಗಳಿನಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೇಡಿಕೆ ಗಮನಾರ್ಹ ಪ್ರಮಾಣದಲ್ಲಿ ಕುಸಿದಿದೆ.

ಏಪ್ರೀಲ್ ಮತ್ತು ಮೇ ತಿಂಗಳಿಗೆ ಹೋಲಿಸಿದರೆ ಮೇನಲ್ಲಿ ಪೆಟ್ರೋಲ್ ಬೇಡಿಕೆ ಶೇ 19 ರಷ್ಟು ಕುಸಿತ ಕಂಡಿದೆ. ಇದೇ ವೇಳೆ ಡಿಸೇಲ್ ಬೆಲೆ ಶೇ 19.9 ರಷ್ಟು ಇಳಿಕೆ ಕಂಡಿದೆ ಎಂಬುದನ್ನು ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಗಳ ಅಂಕಿ ಅಂಶಗಳು ಸ್ಪಷ್ಟಪಡಿಸಿವೆ.

ಲಾಕ್‌ಡೌನ್ ಪರಿಣಾಮವಾಗಿ ದೇಶದ ಬಹುತೇಕ ರಾಜ್ಯಗಳಲ್ಲಿ ಕೈಗಾರಿಕಾ ಚಟುವಟಿಕೆಗಳು, ಆರ್ಥಿಕ ಚಟುವಟಿಕೆಗಳು ಸ್ಥಗೀತಗೊಂಡಿದ್ದರಿಂದ ತೈಲ ಬೇಡಿಕೆಯಲ್ಲಿ ಭಾರೀ ಕುಸಿತ ಕಂಡಿದೆ.

ಇನ್ನೊಂದೆಡೆ ಲಾಕ್‌ಡೌನ್‌ ಇದ್ದರೂ ತೈಲ ಬೆಲೆಯಲ್ಲಿ ನಿರಂತರ ಏರಿಕೆ ಕಂಡು ಬರುತ್ತಿರುವುದು ಕೂಡ ಪೆಟ್ರೋಲ್, ಡಿಸೇಲ್ ಬೇಡಿಕೆಯಲ್ಲಿ ಕುಸಿತ ಕಾಣುವುದಕ್ಕೆ ಕಾರಣ ಇರಬಹುದು. ಕೋವಿಡ್ ಸೋಂಕು ಕಡಿಮೆಯಾಗುತ್ತಿರುವುದರಿಂದ ಹಾಗೂ ಅಲ್ಲಲ್ಲಿ ಲಾಕ್‌ಡೌನ್‌ ತೆರವುಗೊಳಿಸಿ, ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ನೀಡುತ್ತಿರುವುದರಿಂದ ಶೀಘ್ರದಲ್ಲೇ ತೈಲ ಬೇಡಿಕೆಯಲ್ಲಿ ಸುಧಾರಣೆ ಕಂಡು ಬರಬಹುದು ಎಂದು ತೈಲ ಕಂಪೆನಿಗಳು ತಿಳಿಸಿವೆ.

ಆದರೆ ದೇಶದಲ್ಲಿ ಕೋವಿಡ್ ಪರಿಣಾಮವಾಗಿ ಇನ್ನೂ ಕೂಡ ಆತಂಕದ ಕಾರ್ಮೋಡಗಳು ಕವಿದಿರುವುದರಿಂದ ತೈಲ ಬೇಡಿಕೆಯಲ್ಲಿ ಈಗಲೇ ಏರಿಕೆ ಕಾಣುವುದು ಎಂದು ಹೇಳಲಾಗದು. ಈ ನಿಟ್ಟಿನಲ್ಲಿ ತೈಲ ಸಂಸ್ಕರಣಾ ಘಟಕಗಳು ಕಚ್ಚಾ ತೈಲ ಆಮದನ್ನು ಕಡಿತಗೊಳಿಸಲು ಮುಂದಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT