ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬೀದಿ ಬದಿ ವ್ಯಾಪಾರಿಗಳ ನಿಯಂತ್ರಣಕ್ಕೆ ಚಿಂತನೆ’

Published 20 ಜುಲೈ 2023, 16:19 IST
Last Updated 20 ಜುಲೈ 2023, 16:19 IST
ಅಕ್ಷರ ಗಾತ್ರ

ನವದೆಹಲಿ: ಬೀದಿ ಬದಿಯಲ್ಲಿ ಮಾರಾಟ ಮಾಡುವ ತಿನಿಸುಗಳಿಗೆ ಗುಣಮಟ್ಟ ನಿಗದಿ ಮಾಡುವ ಉದ್ದೇಶದಿಂದ, ಬೀದಿ ಬದಿ ವ್ಯಾಪಾರಿಗಳನ್ನು ನಿಯಂತ್ರಣಕ್ಕೆ ಒಳಪಡಿಸಲು ಕೇಂದ್ರವು ಚಿಂತನೆ ನಡೆಸಿದೆ ಎಂದು ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಕುಮಾರ್ ಸಿಂಗ್ ಹೇಳಿದ್ದಾರೆ.

ಇದು ಬಹಳ ಕಷ್ಟದ ಕೆಲಸವಾದರೂ ಈ ಬಗ್ಗೆ ಗಮನ ಹರಿಸಲೇಬೇಕು ಎಂದು ಅವರು ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ. ನಿಯಮಗಳನ್ನು ಉಲ್ಲಂಘಿಸಿದವರಿಗೆ ದಂಡ ವಿಧಿಸಿದರೆ ಸಾಕಾಗುತ್ತದೆಯೋ ಅಥವಾ ಜೈಲುಶಿಕ್ಷೆಯಂತಹ ಕಠಿಣ ಕ್ರಮಕ್ಕೆ ಮುಂದಾಗಬೇಕೋ ಎಂಬುದನ್ನು ಪರಿಶೀಲಿಸಬೇಕಿದೆ ಎಂದಿದ್ದಾರೆ.

ಭಾರತಕ್ಕೆ ಬರುವ ವಿದೇಶಿಯರು, ‘ಭಾರತದಲ್ಲಿ ಅತ್ಯುತ್ತಮ ತಿನಿಸುಗಳು ಸಿಗುವುದು ಬೀದಿ ಬದಿ ವ್ಯಾ‍‍ಪಾರಿಗಳಲ್ಲಿ’ ಎಂಬ ಮಾತು ಕೇಳುತ್ತಿರುತ್ತಾರೆ. ಹೀಗಾಗಿ, ಈ ವ್ಯಾಪಾರಿಗಳಿಗೆ ಅನ್ವಯವಾಗುವ ಕೆಲವು ನಿಯಮಗಳನ್ನು ರೂಪಿಸಬೇಕಾಗಿದೆ. ಆದರೆ ಆ ನಿಯಮಗಳು ಎಷ್ಟು ಕಠಿಣವಾಗಿರಬೇಕು ಎಂಬುದನ್ನು ತೀರ್ಮಾನಿಸಬೇಕಿದೆ ಎಂದು ಸಿಂಗ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT