ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌ಪಿಜಿ ಸಿಲಿಂಡರ್ ಬೆಲೆ ₹ 160 ಇಳಿಕೆ: ಹೊಸ ದರ ಇಂದಿನಿಂದ ಜಾರಿ

Last Updated 1 ಮೇ 2020, 8:01 IST
ಅಕ್ಷರ ಗಾತ್ರ

ನವದೆಹಲಿ: ಅಡುಗೆ ಅನಿಲ ಎಲ್‌ಪಿಜಿ ಸಿಲಿಂಡರ್‌ಗಳ ದರ ಕಡಿತ ಮಾಡಲಾಗಿದ್ದು, ಪ್ರತಿ ಸಿಲಿಂಡರ್‌ಗೆ ₹ 160 ರವರೆಗೆ ಬೆಲೆ ಇಳಿಸಲಾಗಿದೆ. ಇಂದಿನಿಂದ ಜಾರಿಗೆ ಬರುವಂತೆ ದೆಹಲಿಯಲ್ಲಿ ಸಬ್ಸಿಡಿ ರಹಿತ 14.2 ಕೆಜಿ ಸಿಲಿಂಡರ್‌ ₹ 744ರ ಬದಲು ₹ 581.50ಗೆ ಸಿಗಲಿದೆ. ಅದೇ ರೀತಿದೇಶದ ಬೇರೆ ಬೇರೆ ಭಾಗಗಳಲ್ಲಿಯೂ ಬೆಲೆ ಇಳಿಸಲು ತೈಲ ಕಂಪೆನಿಗಳು ನಿರ್ಧರಿಸಿವೆ.

ಮುಂಬೈನಲ್ಲಿ, ಎಲ್‌ಪಿಜಿ ಸಿಲಿಂಡರ್‌ಗೆ ₹ 579 ವೆಚ್ಚವಾಗಲಿದ್ದು, ಈ ಮೊದಲು ₹ 714.50 ನೀಡಬೇಕಿತ್ತು. ಕೋಲ್ಕತ್ತದಲ್ಲಿ ₹ 584.50 ಮತ್ತುಚೆನ್ನೈನಲ್ಲಿ ₹ 569.50 ಇರಲಿದೆ.

ಜಾಗತಿಕ ತೈಲ ಮಾರುಕಟ್ಟೆಯಲ್ಲಿನ ಹಿಂಜರಿತದಿಂದಾಗಿ ಕಳೆದ ಆಗಸ್ಟ್‌ನಿಂದಲೂ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಏರುಗತಿಯಲ್ಲಿ ಸಾಗಿತ್ತು. ಆದರೆ, ಕಳೆದ ಎರಡು ತಿಂಗಳಿನಿಂದ ಬೆಲೆ ಇಳಿಸಲಾಗುತ್ತಿದೆ. ಪ್ರತಿ ತಿಂಗಳ ಮೊದಲ ದಿನದಂದು ಬೆಲೆ ಪರಿಷ್ಕರಿಸಲಾಗುತ್ತದೆ.

ಮಾರ್ಚ್‌ 25ರಿಂದ ದೇಶದಾದ್ಯಂತ ಲಾಕ್‌ಡೌನ್‌ ಘೋಷಣೆಯಾದಾಗಿನಿಂದ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಅಧಿಕ ಪ್ರಮಾಣದಲ್ಲಿ ಖರೀದಿಸಲಾಗುತ್ತಿದೆ ಎಂದು ವರದಿಯಾಗಿತ್ತು. ಆದಾಗ್ಯೂ ದೇಶೀಯ ಬೇಡಿಕೆ ಪೂರೈಸಲು ಸಾಕಾಗುವಷ್ಟು ದಾಸ್ತಾನು ಲಭ್ಯವಿರುವುದರಿಂದ ಅನಿಲಕೊರತೆಯಾಗುವುದಿಲ್ಲ ಎಂದು ತೈಲ ಕಂಪೆನಿಗಳು ತಿಳಿಸಿವೆ.

ಭಾರತದ ಪ್ರಮುಖ ತೈಲ ಕಂಪೆನಿ ಇಂಡಿಯನ್‌ ಆಯಿಲ್‌, ಏಪ್ರಿಲ್‌ ತಿಂಗಳಲ್ಲಿ ಶೇ. 20 ರಷ್ಟು ಅಧಿಕಮಾರಾಟ ಮಾಡಿರುವುದಾಗಿ ವರದಿಯಾಗಿದೆ.

ದೇಶದಲ್ಲಿ ಅಡುಗೆ ಅನಿಲದ ಬೆಲೆ ನಿಗದಿಯು, ಅಂತರರಾಷ್ಟ್ರೀಯ ಮಾನದಂಡ ಮತ್ತು ರೂಪಾಯಿ–ಡಾಲರ್‌ ವಿನಿಮಯ ದರವನ್ನು ಅವಲಂಬಿಸಿದೆ.

ದೇಶದ ಪ್ರತಿ ಕುಟುಂಬವು ಒಂದು ವರ್ಷದಲ್ಲಿ 14.2 ಕೆ.ಜಿ ತೂಕದ ಒಟ್ಟು 12 ಸಿಲಿಂಡರ್‌ಗಳನ್ನು ಸಬ್ಸಿಡಿ ದರದಲ್ಲಿ ಕೊಳ್ಳಬಹುದಾಗಿದೆ. ಸಬ್ಸಿಡಿ ಹಣವನ್ನು ಸರ್ಕಾರವು ನೇರವಾಗಿ ಗ್ರಾಹಕರ ಬ್ಯಾಂಕ್‌ ಖಾತೆಗೆ ವರ್ಗಾಯಿಸುತ್ತದೆ.

ಲಾಕ್‌ಡೌನ್‌ ಜಾರಿಯಾದ ನಂತರ, ಏಪ್ರಿಲ್‌ನಿಂದ ಜೂನ್‌ವರೆಗೆ ಸುಮಾರು 8 ಕೋಟಿ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಉಚಿತವಾಗಿ 3 ಸಿಲಿಂಡರ್‌ಗಳನ್ನು ನೀಡಲು, ಕೇಂದ್ರ ಸರ್ಕಾರ ಹೊಸದಾಗಿ ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಯೋಜನೆ ಆರಂಭಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT