ಮಂಗಳವಾರ, ಫೆಬ್ರವರಿ 25, 2020
19 °C

ಸಬ್ಸಿಡಿರಹಿತ ಎಲ್‌ಪಿಜಿ ಬೆಲೆ ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸಬ್ಸಿಡಿರಹಿತ ಅಡುಗೆ ಅನಿಲದ (ಎಲ್‌ಪಿಜಿ) ಬೆಲೆಯನ್ನು ದೇಶದಾದ್ಯಂತ 14.2 ಕೆಜಿಯ ಪ್ರತಿ ಸಿಲಿಂಡರ್‌ಗೆ ಸರಾಸರಿ ₹15ರಂತೆ ಹೆಚ್ಚಿಸಲಾಗಿದೆ.

ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಸಂಸ್ಥೆಗಳು ಸತತ ನಾಲ್ಕನೇ ತಿಂಗಳೂ ದರ ಹೆಚ್ಚಿಸಿವೆ. ಈ ತಿಂಗಳ ಆರಂಭದಿಂದಲೇ ಈ ಬೆಲೆ ಏರಿಕೆ ಜಾರಿಗೆ ಬಂದಿದೆ. ದರ ಹೆಚ್ಚಳವು ನಗರದಿಂದ ನಗರಕ್ಕೆ ವ್ಯತ್ಯಾಸಗೊಳ್ಳುತ್ತದೆ. ಬೆಂಗಳೂರಿನಲ್ಲಿ ₹680ರಷ್ಟಿದ್ದ ಬೆಲೆ ಈಗ ₹697.50ಕ್ಕೆ (₹17.50 ಹೆಚ್ಚಳ) ತಲುಪಿದೆ. ದೆಹಲಿ (₹13.50) ಮತ್ತು ಚೆನ್ನೈನಲ್ಲಿ ₹18ರಂತೆ ಏರಿಕೆಯಾಗಿದೆ.

ಒಂದು ವರ್ಷದಲ್ಲಿ ಪ್ರತಿ ಕುಟುಂಬಕ್ಕೆ 12 ಎಲ್‌ಪಿಜಿ ಸಿಲಿಂಡರ್‌ಗಳನ್ನು ಸಬ್ಸಿಡಿ ದರದಲ್ಲಿ ವಿತರಿಸಲಾಗುತ್ತಿದೆ. ಇವುಗಳ ಖರೀದಿ ಸಂದರ್ಭದಲ್ಲಿ ಪೂರ್ಣ ಬೆಲೆ ಪಾವತಿಸಬೇಕಾಗುತ್ತದೆ. ಸಬ್ಸಿಡಿ ಮೊತ್ತವನ್ನು ಆನಂತರ ಗ್ರಾಹಕರ ಬ್ಯಾಂಕ್‌ ಖಾತೆಗೆ ವರ್ಗಾಯಿಸಲಾಗುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು