ನವದೆಹಲಿ: ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ಗುರುವಾರ ₹ 3.50ರಷ್ಟು ಹೆಚ್ಚಿಸಲಾಗಿದೆ. ಇದರಿಂದ ಬೆಂಗಳೂರಿನಲ್ಲಿ 14.2 ಕೆ.ಜಿ ತೂಕದ ಸಿಲಿಂಡರ್ ದರ ₹ 1,006ಕ್ಕೆ ಏರಿಕೆ ಆಗಿದೆ.

ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳ ದರ ಅಧಿಸೂಚನೆಯ ಪ್ರಕಾರ, ದೆಹಲಿಯಲ್ಲಿ ಸಬ್ಸಿಡಿಯೇತರ ಎಲ್‌ಪಿಜಿ ಸಿಲಿಂಡರ್ ಬೆಲೆ ₹ 1003ಕ್ಕೆ ತಲುಪಿದೆ.

ಈ ತಿಂಗಳಿನಲ್ಲಿ ಎರಡನೇ ಬಾರಿ ದರ ಹೆಚ್ಚಳ ಮಾಡಲಾಗಿದೆ. ಮೇ 7ರಂದು ₹ 50ರಷ್ಟು ಹೆಚ್ಚಿಸಲಾಗಿತ್ತು. 2021ರ ಏಪ್ರಿಲ್‌ನಿಂದ ಈವರೆಗೆ ಪ್ರತಿ ಸಿಲಿಂಡರ್ ದರ ₹ 193.5ರಷ್ಟು ಹೆಚ್ಚಾಗಿದೆ.

ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು ₹ 8ರಷ್ಟು ಹೆಚ್ಚಿಸಲಾಗಿದೆ. ಇದರಿಂದ ಬೆಂಗಳೂರಿನಲ್ಲಿ19 ಕೆ.ಜಿ. ತೂಕದ ಸಿಲಿಂಡರ್ ದರ ₹ 2,435ಕ್ಕೆ ಏರಿಕೆ ಆಗಿದೆ. ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆ ಮಾಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.