ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರ ₹50 ಏರಿಕೆ

Last Updated 1 ಮಾರ್ಚ್ 2023, 11:33 IST
ಅಕ್ಷರ ಗಾತ್ರ

ನವದೆಹಲಿ: ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ₹ 50ರಷ್ಟು ಹೆಚ್ಚಿಸಲಾಗಿದೆ. ಇದರ ಪರಿಣಾಮವಾಗಿ ಬೆಂಗಳೂರಿನಲ್ಲಿ 14.2 ಕೆ.ಜಿ. ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆಯು ₹ 1,105.50ಗೆ ತಲುಪಿದೆ. ಸರಿಸುಮಾರು ಎಂಟು ತಿಂಗಳ ನಂತರದಲ್ಲಿ ಬೆಲೆ ಏರಿಕೆ ಆಗಿದೆ.

ಉಜ್ವಲಾ ಯೋಜನೆಯ ವ್ಯಾಪ್ತಿಯಲ್ಲಿ ಇಲ್ಲದ ಹೆಚ್ಚಿನ ಗ್ರಾಹಕರಿಗೆ ಈಗ ಎಲ್‌ಪಿಜಿ ಸಿಲಿಂಡರ್‌ಗೆ ಸಬ್ಸಿಡಿ ಸಿಗುತ್ತಿಲ್ಲ. ಪ್ರಧಾನ ಮಂತ್ರಿ ಉಜ್ವಲಾ ಯೋಜನೆಯ ಅಡಿಯಲ್ಲಿ ಎಲ್‌ಪಿಜಿ ಸಂಪರ್ಕ ಪಡೆದವರಿಗೆ ಪ್ರತಿ ಸಿಲಿಂಡರ್‌ಗೆ ಕೇಂದ್ರದಿಂದ ₹ 200ರಷ್ಟು ಸಬ್ಸಿಡಿ ದೊರೆಯುತ್ತದೆ.

2022ರ ಜುಲೈ ನಂತರದಲ್ಲಿ ಮನೆಬಳಕೆಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಪರಿಷ್ಕರಣೆ ಆಗುತ್ತಿರುವುದು ಇದೇ ಮೊದಲು.

ವಾಣಿಜ್ಯ ಬಳಕೆಯ, 19 ಕೆ.ಜಿ. ತೂಕದ ಎಲ್‌ಪಿಜಿ ಬೆಲೆಯನ್ನು ತೈಲ ಮಾರಾಟ ಕಂಪನಿಗಳು ಸಿಲಿಂಡರ್‌ಗೆ ₹ 350.50ರಂತೆ ಹೆಚ್ಚಳ ಮಾಡಿವೆ. ಇದರ ಪರಿಣಾಮವಾಗಿ ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆಯು ₹ ₹ 2,190.50ಗೆ ಏರಿಕೆ ಆಗಿದೆ. ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಜನವರಿಯಲ್ಲಿಯೂ ಹೆಚ್ಚಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT