ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ ದರ ₹250 ಹೆಚ್ಚಳ

Last Updated 1 ಏಪ್ರಿಲ್ 2022, 15:40 IST
ಅಕ್ಷರ ಗಾತ್ರ

ನವದೆಹಲಿ: ವಾಣಿಜ್ಯ ಬಳಕೆಯ ಅಡುಗೆ ಅನಿಲದ ದರವನ್ನು ಪ್ರತಿ ಸಿಲಿಂಡರ್‌ಗೆ ಶುಕ್ರವಾರ ₹ 250ರಷ್ಟು ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆಯು ಬೆಂಗಳೂರಿನಲ್ಲಿ ₹ 2,325ಕ್ಕೆ ಏರಿಕೆ ಆಗಿದೆ ಎಂದು ಮೂಲಗಳು ತಿಳಿಸಿವೆ.

ಮನೆಗಳಲ್ಲಿ ಬಳಸುವ ಎಲ್‌ಪಿಜಿ ಸಿಲಿಂಡರ್‌ ದರ ದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸದ್ಯ
14.2 ಕೆ.ಜಿ. ತೂಕದ ಸಿಲಿಂಡರ್‌ ದರವು ಬೆಂಗಳೂರಿನಲ್ಲಿ₹ 952 ಇದೆ. ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಶುಕ್ರವಾರ ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಎಟಿಎಫ್‌ ದರ ಏರಿಕೆ: ವಿಮಾನ ಇಂಧನ (ಜೆಟ್‌ ಇಂಧನ) ದರವನ್ನು ಶುಕ್ರವಾರ ಪ್ರತಿ ಕಿಲೋ ಲೀಟರಿಗೆ ₹ 2,258.54ರಷ್ಟು (ಶೇ 2 ಹೆಚ್ಚಳ ಮಾಡಲಾಗಿದೆ. ದೆಹಲಿಯಲ್ಲಿ ಪ್ರತಿ ಕಿಲೋ ಲೀಟರಿಗೆ ₹ 1.12 ಲಕ್ಷಕ್ಕೆ ಏರಿಕೆ ಆಗಿದೆ. (ಒಂದು ಕಿಲೋ ಲೀಟರ್‌ ಎಂದರೆ ಒಂದು ಸಾವಿರ ಲೀಟರ್).

ಜನವರಿ 1 ರಿಂದ ಈವರೆಗೆಏಳನೇ ಬಾರಿಗೆ ದರ ಹೆಚ್ಚಳ ಮಾಡಿದ್ದು, ಪ್ರತಿ ಕಿಲೋ ಲೀಟರಿಗೆ
₹ 38,902.92ರಷ್ಟು ಹೆಚ್ಚಾಗಿದೆ.

ಸಿಎನ್‌ಜಿ ದರ ಪ್ರತಿ ಕೆ.ಜಿಗೆ 80 ಪೈಸೆ ಹೆಚ್ಚಿಸಲಾಗಿದೆ. ಒಂದು ತಿಂಗಳಿನಲ್ಲಿ ಸಿಎನ್‌ಜಿ ದರ ₹ 4ರಷ್ಟು ಹೆಚ್ಚಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT