ನವದೆಹಲಿ: ದೇಶದ ಇಂಧನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ ಎಂದು ಕೇಂದ್ರ ಇಂಧನ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಸರ್ಕಾರವು ಎಲ್ಪಿಜಿ ಉತ್ಪಾದನೆಯನ್ನು ದಿನಕ್ಕೆ 35,000 ಟನ್ಗಳಿಂದ 54,000 ಟನ್ಗಳಿಗೆ ಹೆಚ್ಚಿಸಿದೆ ಎಂದಿದ್ದಾರೆ.

ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ವಾರ್ಷಿಕ ವ್ಯಾಪಾರ ಶೃಂಗಸಭೆಯಲ್ಲಿ ಮಾತನಾಡಿದ ಪುರಿ, ‘ಎಲ್ಪಿಜಿ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ. ದೇಶದಲ್ಲಿ ಪ್ರಸ್ತುತ 69 ದಿನಗಳಿಗೆ ಸಾಕಾಗುವಷ್ಟು ಕಚ್ಚಾ ತೈಲ ಹಾಗೂ 45 ದಿನಗಳಿಗೆ ಆಗುವಷ್ಟು ಎಲ್ಪಿಜಿ ದಾಸ್ತಾನು ಇದೆ’ ಎಂದು ತಿಳಿಸಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ನಡುವೆಯೂ ಇಂಧನ ಭದ್ರತೆಗಾಗಿ ಎಲ್ಪಿಜಿ ಉತ್ಪಾದನೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

‘ಪ್ರಧಾನಿ ಮೋದಿ ಅವರ ‘ಮಿತವ್ಯಯ’ದ ಮನವಿಯನ್ನು ಎಚ್ಚರಿಕೆಯ ಕರೆ ಎಂದು ಪರಿಗಣಿಸಬೇಕು. ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಬಹುದಾದ ಹಣಕಾಸಿನ ಒತ್ತಡವನ್ನು ಕಡಿಮೆ ಮಾಡುವ ಕ್ರಮಗಳ ಬಗ್ಗೆ ಯೋಚಿಸಲು ಇದು ಸಕಾಲ’ ಎಂದು ಪುರಿ ಪುನರುಚ್ಚರಿಸಿದ್ದಾರೆ.

*ಮೋದಿ ಹೇಳಿದ್ದೇನು?*

ಭಾನುವಾರ ಹೈದರಾಬಾದ್ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಪಶ್ಚಿಮ ಏಷ್ಯಾದ ಯುದ್ಧದಿಂದಾಗಿ ಭಾರತದ ಆರ್ಥಿಕತೆಯ ಮೇಲೆ ಬೀರುವ ಪರಿಣಾಮಗಳನ್ನು ಎದುರಿಸಲು ಕೆಲವು ಸಲಹೆಗಳನ್ನು ನೀಡಿದ್ದರು.

ಪೆಟ್ರೋಲ್ ಮತ್ತು ಡೀಸೆಲ್ ಬಳಕೆ ಕಡಿಮೆ ಮಾಡುವುದು, ಮೆಟ್ರೊ ರೈಲು ಬಳಕೆ, ಕಾರ್ಪೂಲಿಂಗ್ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಆದ್ಯತೆ ನೀಡುವುದು. ಕನಿಷ್ಠ ಒಂದು ವರ್ಷದ ಮಟ್ಟಿಗೆ ಚಿನ್ನದ ಖರೀದಿ ಮತ್ತು ವಿದೇಶಿ ಪ್ರವಾಸ ಮುಂದೂಡುವುದು. ಸಾಧ್ಯವಿರುವ ಕಡೆ ವರ್ಕ್ ಫ್ರಮ್ ಹೋಮ್ (ಮನೆಯಿಂದಲೇ ಕೆಲಸ) ಮಾಡುವುದು. ಖಾದ್ಯ ತೈಲ ಮತ್ತು ರಾಸಾಯನಿಕ ಗೊಬ್ಬರಗಳ ಬಳಕೆಯನ್ನು ಮಿತಗೊಳಿಸಿ, ನೈಸರ್ಗಿಕ ಕೃಷಿ ಹಾಗೂ ಸ್ವದೇಶಿ ಉತ್ಪನ್ನಗಳಿಗೆ ಒತ್ತು ನೀಡಬೇಕೆಂದು ಮೋದಿ ಸಲಹೆ ನೀಡಿದ್ದರು.

ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಸಂದರ್ಭದಲ್ಲಿ ದೇಶದ ಆರ್ಥಿಕ ಸ್ಥಿರತೆಯನ್ನು ಕಾಯ್ದುಕೊಳ್ಳಲು ಈ ಕ್ರಮಗಳು ಅನಿವಾರ್ಯ ಎಂದು ಮೋದಿ ಒತ್ತಿ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.