ನವದೆಹಲಿ: ಎಲ್ಪಿಜಿ ಪೂರೈಕೆ ಸ್ಥಿರವಾಗಿದೆ ಎಂದು ದೇಶದ ಬಹುದೊಡ್ಡ ತೈಲ ಕಂಪನಿಯಾದ ಇಂಡಿಯನ್ ಆಯಿಲ್ ಕಾರ್ಪೊರೇಶನ್(ಐಒಸಿ) ಹೇಳಿದೆ. ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಅಸ್ಥಿರತೆ ನಡುವೆಯೂ ಪೂರೈಕೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದೇವೆ ಎಂದು ಹೇಳಿದೆ.

ಗೃಹಬಳಕೆಗೆ ತೊಂದರೆಯಾಗಬಾರದೆಂದು ದಿನಕ್ಕೆ 28 ಲಕ್ಷ ಎಲ್ಪಿಜಿ ಸಿಲಿಂಡರ್ ಪೂರೈಕೆ ಮಾಡಲಾಗುತ್ತಿದೆ ಎಂದು ಕಂಪನಿ ಹೇಳಿದೆ.

ಶೇ 87ರಷ್ಟು ಸಿಲಿಂಡರ್ ಮರುಪೂರಣ ಬುಕ್ಕಿಂಗ್ ಅನ್ನು ಆನ್ಲೈನ್ ಮೂಲಕ ಮಾಡಲಾಗುತ್ತಿದೆ. ಡೆಲಿವರಿಯನ್ನು ಒಟಿಪಿ ಮೂಲಕ ದೃಢೀಕರಿಸಲಾಗುತ್ತಿದೆ ಎಂದು ಕಂಪನಿ ತಿಳಿಸಿದೆ.

‘ಜಾಗತಿಕ ಇಂಧನ ಮಾರುಕಟ್ಟೆ ಮೇಲೆ ಭೌಗೋಳಿಕ ರಾಜಕೀಯ ಬಿಕ್ಕಟ್ಟಿನ ಪರಿಣಾಮದ ನಡುವೆಯೂ ನಿಕಟ ಮೇಲ್ವಿಚಾರಣೆ ಹಿನ್ನೆಲೆಯಲ್ಲಿ ಭಾರತದಲ್ಲಿ ಎಲ್ಪಿಜಿ ಪೂರೈಕೆಯು ಸ್ಥಿರ ಮತ್ತು ಸಮರ್ಪಕವಾಗಿದೆ. ಅತ್ಯಂತ ಆದ್ಯತೆ ಮೇರೆಗೆ ಗೃಹಬಳಕೆ ಸಿಲಿಂಡರ್ಗಳನ್ನು ಪೂರೈಕೆ ಮಾಡಲಾಗುತ್ತಿದೆ’ ಎಂದು ಕಂಪನಿ ಹೇಳಿಕೆಯಲ್ಲಿ ತಿಳಿಸಿದೆ.

ಎಲ್ಪಿಜಿ ಮರುಪೂರಣ ಬುಕ್ಕಿಂಗ್ಗಾಗಿ ಗ್ರಾಹಕರು ಎಸ್ಎಂಎಸ್ ಮತ್ತು ಐವಿಆರ್ಎಸ್ನಂತಹ ಡಿಜಿಟಲ್ ವೇದಿಕೆ ಬಳಸುವಂತೆ ಕಂಪನಿ ಸಲಹೆ ನೀಡಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿರುವ ಎಲ್ಪಿಜಿ ಕಳವಳವನ್ನು ಆಲಿಸಲಾಗುತ್ತಿದ್ದು, ಪರಿಹಾರ ಸೂಚಿಸಲಾಗುತ್ತಿದೆ. ಕೆಲ ಎಲ್ಪಿಜಿ ಪೂರೈಕೆದಾರರ ಅಕ್ರಮ ಮತ್ತು ಕಾಳಸಂತೆಯಲ್ಲಿ ಮಾರಾಟ ಕುರಿತಂತೆ ಪರಿಶೀಲನೆಗೆ ತಂಡಗಳನ್ನು ರಚಿಸಲಾಗಿದೆ ಎಂದು ಕಂಪನಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.