ಗುರುವಾರ , ಮಾರ್ಚ್ 30, 2023
32 °C

ಮಹೀಂದ್ರ ಲಾಭ ಎಂಟು ಪಟ್ಟು ಹೆಚ್ಚಳ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮಹೀಂದ್ರ ಆ್ಯಂಡ್‌ ಮಹೀಂದ್ರ ಕಂಪನಿಯ ತೆರಿಗೆ ನಂತರದ ಲಾಭವು ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹ 1,432 ಕೋಟಿ ಆಗಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹ 162 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭವು ಎಂಟು ಪಟ್ಟಿಗಿಂತ ತುಸು ಹೆಚ್ಚಾಗಿದೆ ಎಂದು ಕಂಪನಿಯು ತಿಳಿಸಿದೆ.

ಕಂಪನಿಯ ವರಮಾನವು ₹ 11,590 ಕೋಟಿಯಿಂದ ₹ 13,305 ಕೋಟಿಗೆ, ಅಂದರೆ ಶೇಕಡ 15ರಷ್ಟು, ಏರಿಕೆ ಕಂಡಿದೆ ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ.

ತ್ರೈಮಾಸಿಕದಲ್ಲಿ ಕಂಪನಿಯು 99,334 ವಾಹನಗಳನ್ನು ಮಾರಾಟ ಮಾಡಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ 91,536 ವಾಹನಗಳನ್ನು ಮಾರಾಟ ಮಾಡಿತ್ತು. ಇದಕ್ಕೆ ಹೋಲಿಸಿದರೆ ಶೇ 9ರಷ್ಟು ಏರಿಕೆ ಆಗಿದೆ. ಆದರೆ, ಟ್ರ್ಯಾಕ್ಟರ್‌ ಮಾರಾಟವು ಶೇ 5ರಷ್ಟು ಇಳಿಕೆ ಆಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು