ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಕಾರ್ಪಿಯೊ–ಎನ್‌ ವಾಹನ ಬಿಡುಗಡೆ

Last Updated 27 ಜೂನ್ 2022, 15:53 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಮಹೀಂದ್ರ ಆ್ಯಂಡ್ ಮಹೀಂದ್ರ ಕಂಪನಿಯು ಸ್ಕಾರ್ಪಿಯೊ–ಎನ್‌ ಎಸ್‌ಯುವಿ ವಾಹನದ ಐದು ಮಾದರಿಗಳನ್ನು ಸೋಮವಾರ ಬಿಡುಗಡೆ ಮಾಡಿದೆ. ಇದರ ಎಕ್ಸ್‌ ಷೋರೂಂ ಬೆಲೆ ₹ 11.99 ಲಕ್ಷದಿಂದ ಶುರುವಾಗುತ್ತದೆ.

ಇದರ ಬುಕಿಂಗ್ ಜುಲೈ 30ರಿಂದ ಶುರುವಾಗಲಿದೆ. ಆನ್‌ಲೈನ್‌ ಮೂಲಕ ಹಾಗೂ ಮಹೀಂದ್ರ ಡೀಲರ್‌ಗಳ ಮೂಲಕ ಬುಕ್ ಮಾಡಬಹುದು. ವಾಹನವನ್ನು ಗ್ರಾಹಕರಿಗೆ ಹಸ್ತಾಂತರ ಮಾಡುವ ಪ್ರಕ್ರಿಯೆಯು ಹಬ್ಬಗಳ ಋತುವಿನಲ್ಲಿ ಶುರುವಾಗಲಿದೆ ಎಂದು ಕಂಪನಿ ಹೇಳಿದೆ.

ಹೊಸ ಮಾದರಿಯನ್ನು ಅಭಿವೃದ್ಧಿಪಡಿಸಲು ₹ 1,600 ಕೋಟಿ ಹೂಡಿಕೆ ಮಾಡಲಾಗಿದೆ ಎಂದು ಕಂಪನಿ ಹೇಳಿದೆ. ಈ ಎಸ್‌ಯುವಿಯನ್ನು ದಕ್ಷಿಣ ಆಫ್ರಿಕಾ ಮತ್ತು ನೇಪಾಳದಲ್ಲಿ ಕೂಡ ಬಿಡುಗಡೆ ಮಾಡಲಾಗಿದೆ. ಇದು ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ನಲ್ಲಿಯೂ ಬಿಡುಗಡೆ ಆಗಲಿದೆ ಎಂದು ಕಂಪನಿಯು ತಿಳಿಸಿದೆ.

ಪೆಟ್ರೋಲ್ ಹಾಗೂ ಡೀಸೆಲ್ ಆಯ್ಕೆಗಳನ್ನು ಇದು ಹೊಂದಿದ್ದು, ಮ್ಯಾನುವಲ್ ಮತ್ತು ಆಟೊಮ್ಯಾಟಿಕ್ ಟ್ರಾನ್ಸ್‌ಮಿಷನ್ ಆಯ್ಕೆಗಳೂ ಲಭ್ಯವಿರಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT