ಗುರುವಾರ , ಸೆಪ್ಟೆಂಬರ್ 29, 2022
28 °C

ಎಲೆಕ್ಟ್ರಿಕ್ ವಾಹನಗಳತ್ತ ಹೆಚ್ಚು ಗಮನ: ಮಹೀಂದ್ರ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಐದು ವರ್ಷಗಳಲ್ಲಿ ಕಂಪನಿಯ ಒಟ್ಟಾರೆ ಎಸ್‌ಯುವಿಗಳಲ್ಲಿ ವಿದ್ಯುತ್ ಚಾಲಿತ ಎಸ್‌ಯುವಿ ಪಾಲು ಶೇಕಡ 20ರಿಂದ ಶೇ 30ರವರೆಗೆ ಇರುವಂತೆ ಯೋಜನೆ ರೂಪಿಸಲಾಗುತ್ತಿದೆ’ ಎಂದು ಮಹೀಂದ್ರ ಆ್ಯಂಡ್‌ ಮಹೀಂದ್ರ ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಶ್‌ ಜೆಜುರಿಕರ್‌ ಹೇಳಿದ್ದಾರೆ.

‘ದೇಶದಲ್ಲಿ ವಿದ್ಯುತ್ ಚಾಲಿತ ವಾಹನಗಳ ಬಳಕೆ ಹೆಚ್ಚಾಗುತ್ತಿದ್ದು, ಹೊಸ ಉತ್ಪನ್ನಗಳ ಬಿಡುಗಡೆಗೆ ಮತ್ತು ಆ ಕ್ಷೇತ್ರದಲ್ಲಿ ಹೂಡಿಕೆ ಮಾಡುವತ್ತ ಕಂಪನಿ ಗಮನ ಹರಿಸಿದೆ’ ಎಂದು ಅವರು ತಿಳಿಸಿದ್ದಾರೆ.

‘ನಮ್ಮ ಆಂತರಿಕ ಸಂಶೋಧನೆಯ ಪ್ರಕಾರ, ಈಗ ಎಸ್‌ಯುವಿ ಖರೀದಿಸುವವರ ಪೈಕಿ ಶೇ 25ರಷ್ಟು ಜನ ಮುಂದಿನ ದಿನಗಳಲ್ಲಿ ವಿದ್ಯುತ್‌ ಚಾಲಿತ ಎಸ್‌ಯುವಿ ಖರೀದಿ ಮಾಡಲು ಬಯಸಿದ್ದಾರೆ’ ಎಂದು ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.