ಶುಕ್ರವಾರ, ಡಿಸೆಂಬರ್ 4, 2020
22 °C

ಮಹೀಂದ್ರಾ ಲಾಭ ಇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮಹೀಂದ್ರಾ ಆ್ಯಂಡ್ ಮಹೀಂದ್ರಾ ಕಂಪನಿಯ ತೆರಿಗೆ ಪಾವತಿಸಿದ ನಂತರದ ಲಾಭವು ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಶೇ 88ರಷ್ಟು ಇಳಿಕೆಯಾಗಿದ್ದು ₹ 162 ಕೋಟಿಗೆ ತಲುಪಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ತೆರಿಗೆ ಪಾವತಿಸಿದ ನಂತರದ ಲಾಭ ₹ 1,355 ಕೋಟಿ ಲಾಭ ಗಳಿಸಿತ್ತು.

ಮಾರಾಟ ಇಳಿಕೆ ಆಗಿರುವುದರಿಂದ ಲಾಭದಲ್ಲಿ ಕುಸಿತ ಕಂಡಿದೆ. ತ್ರೈಮಾಸಿಕ ಅವಧಿಯಲ್ಲಿ 87,332 ವಾಹನಗಳನ್ನು ಮಾರಾಟ ಮಾಡಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿನ ಮಾರಾಟ 1.10 ಲಕ್ಷ ಇತ್ತು. ಇದಕ್ಕೆ ಹೋಲಿಸಿದರೆ ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿನ ಮಾರಾಟ ಶೇ 21ರಷ್ಟು ಇಳಿಕೆಯಾಗಿದೆ ಎಂದು ಕಂಪನಿ ತಿಳಿಸಿದೆ.

ತ್ರೈಮಾಸಿಕದಲ್ಲಿ ಕಂಪನಿಯ ವರಮಾನ ಶೇ 6 ರಷ್ಟು ಹೆಚ್ಚಾಗಿದ್ದು ₹ 10,935 ಕೋಟಿಗಳಿಂದ ₹ 11,590 ಕೋಟಿಗಳಿಗೆ ಏರಿಕೆಯಾಗಿದೆ ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು