ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಹೀಂದ್ರ ಕಂಪನಿಗೆ ₹2,658 ಕೋಟಿ ಲಾಭ

Published 14 ಫೆಬ್ರುವರಿ 2024, 15:49 IST
Last Updated 14 ಫೆಬ್ರುವರಿ 2024, 15:49 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಮಹೀಂದ್ರ ಆ್ಯಂಡ್‌ ಮಹೀಂದ್ರ ಕಂಪನಿಯ 2023–24ನೇ ಹಣಕಾಸು ವರ್ಷದ ಡಿಸೆಂಬರ್‌ ತ್ರೈಮಾಸಿಕದ ತೆರಿಗೆ ನಂತರದ ನಿವ್ವಳ ಲಾಭವು ₹2,658 ಕೋಟಿ ಆಗಿದೆ.

ಹಿಂದಿನ ಹಣಕಾಸು ವರ್ಷದ ಇದೇ ತ್ರೈಮಾಸಿಕದಲ್ಲಿ ಕಂಪನಿಯು ₹1,984 ಕೋಟಿ ನಿವ್ವಳ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಲಾಭದಲ್ಲಿ ಶೇ 34ರಷ್ಟು ಏರಿಕೆಯಾಗಿದೆ ಎಂದು ಕಂಪನಿಯು ಷೇರುಪೇಟೆಗೆ ತಿಳಿಸಿದೆ.

ಕಂಪನಿಯ ವರಮಾನವು ₹30,621 ಕೋಟಿಯಿಂದ ₹35,299 ಕೋಟಿಗೆ ಏರಿಕೆಯಾಗಿದೆ. ಒಟ್ಟಾರೆ ವರಮಾನವು ಶೇ 15ರಷ್ಟು ಹೆಚ್ಚಾಗಿದೆ.

ಡಿಸೆಂಬರ್‌ ತ್ರೈಮಾಸಿಕದಲ್ಲಿ ಕಂಪನಿಯ ವಾಹನಗಳ ಮಾರಾಟವು ಶೇ 20ರಷ್ಟು ಹೆಚ್ಚಾಗಿದೆ. ಒಟ್ಟು 2,11,443 ವಾಹನಗಳು ಮಾರಾಟವಾಗಿವೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ 1,76,094 ವಾಹನಗಳು ಮಾರಾಟವಾಗಿದ್ದವು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT