ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿತ್ತೀಯ ಶಿಸ್ತು ಕಾಯ್ದುಕೊಳ್ಳಲುಪನಗರಿಯಾ ಸಲಹೆ

Last Updated 19 ನವೆಂಬರ್ 2018, 18:38 IST
ಅಕ್ಷರ ಗಾತ್ರ

ನವದೆಹಲಿ: ‘ವಿತ್ತೀಯ ಶಿಸ್ತನ್ನು ಕಾಯ್ದುಕೊಳ್ಳುವ ಮೂಲಕ ಆರ್ಥಿಕ ಸುಧಾರಣಾ ಕ್ರಮಗಳನ್ನು ಮುಂದುವರಿಸಿಕೊಂಡು ಹೋಗಿ’ ಎಂದು ನೀತಿ ಆಯೋಗದ ಮಾಜಿ ಉಪಾಧ್ಯಕ್ಷ ಅರವಿಂದ ಪನಗರಿಯಾ ಅವರು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

‘2018–19ನೇ ಹಣಕಾಸು ವರ್ಷಕ್ಕೆ ವಿತ್ತೀಯ ಕೊರತೆಯನ್ನು ಶೇ 3.3ರಲ್ಲಿ ನಿಯಂತ್ರಿಸುವುದಾಗಿ ಸರ್ಕಾರ ಹೇಳಿದೆ. ಇದಕ್ಕೆ ಸರ್ಕಾರ ಬದ್ಧವಾಗಿರಬೇಕು.ನಾಲ್ಕು ವರ್ಷಗಳಲ್ಲಿ ವಿತ್ತೀಯ ಶಿಸ್ತು ಕಾಯ್ದುಕೊಳ್ಳವಂತಹ ಸಾಧನೆಯನ್ನು ಸರ್ಕಾರ ಮಾಡಿದೆ.

‘ಆರ್ಥಿಕ ಸ್ಥಿರತೆ ಸಾಧಿಸುವ ಹಾದಿಯಲ್ಲಿಯೂ ಪ್ರಮುಖ ಪಾತ್ರ ವಹಿಸಿದೆ. ಜಿಎಸ್‌ಟಿಯಂತಹ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸುವಲ್ಲಿ ಹಾಲಿ ಸರ್ಕಾರ ಭಾರಿ ಮಟ್ಟದ ಪ್ರಗತಿ ಸಾಧಿಸಿದೆ' ಎಂದು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT