ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 45 ಸಾವಿರ ಕೋಟಿ ವರಮಾನ: ಮಲಬಾರ್‌ ಗುರಿ

Last Updated 20 ಏಪ್ರಿಲ್ 2022, 11:16 IST
ಅಕ್ಷರ ಗಾತ್ರ

ಬೆಂಗಳೂರು: ಮಲಬಾರ್‌ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌ ಕಂಪನಿಯು ಪ್ರಸಕ್ತ ಹಣಕಾಸು ವರ್ಷದಲ್ಲಿ ₹ 45 ಸಾವಿರ ಕೋಟಿ ವರಮಾನ ಗಳಿಸುವ ಗುರಿ ಇಟ್ಟುಕೊಂಡಿದೆ.

2021–22ನೇ ಹಣಕಾಸು ವರ್ಷದಲ್ಲಿ ವರಮಾನವು ₹ 30 ಸಾವಿರ ಕೋಟಿ ಆಗಿದೆ. 2020–21ನೇ ಹಣಕಾಸು ವರ್ಷಕ್ಕೆ ಹೋಲಿಸಿದರೆ ವರಮಾನದಲ್ಲಿ ಶೇಕಡ 35ರಷ್ಟು ಏರಿಕೆ ಆಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ದೇಶದಾದ್ಯಂತ ಹೊಸ ರಿಟೇಲ್‌ ಮಾರಾಟ ಮಳಿಗೆಗಳನ್ನು ತೆರೆಯುತ್ತಿರುವುದರಿಂದ ಹೆಚ್ಚಿನ ಗ್ರಾಹಕರನ್ನು ತಲುಪಲು ಸಾಧ್ಯವಾಗಿದೆ. ಇದರಿಂದಾಗಿ ವಹಿವಾಟಿನಲ್ಲಿ ಉತ್ತಮ ಪ್ರಗತಿ ಸಾಧ್ಯವಾಗಿದೆ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT