ಬೆಂಗಳೂರು: ಚಿನ್ನಾಭರಣ ಮಾರಾಟ ಕಂಪನಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್, ರಾಜ್ಯದಲ್ಲಿ ತನ್ನ ವಹಿವಾಟಿಗೆ ಚಾಲನೆ ನೀಡಿದೆ.

ಕೋವಿಡ್ ಪಿಡುಗಿನ ಹಿನ್ನೆಲೆಯಲ್ಲಿ ಸರ್ಕಾರ ನಿಗದಿಪಡಿಸಿರುವ ಎಲ್ಲ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡು ವಹಿವಾಟು ಪುನರಾರಂಭಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ನಮ್ಮೆಲ್ಲ ಗ್ರಾಹಕರು ಮತ್ತು ಸಿಬ್ಬಂದಿಯ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಎಲ್ಲ ಷೋರೂಂಗಳಲ್ಲಿ ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ವಹಿವಾಟು ಪುನರಾರಂಭಿಸುವ ಮುನ್ನ ಷೋರೂಂಗಳನ್ನು ಸ್ವಚ್ಛಗೊಳಿಸಲಾಗಿದೆ. ಸ್ಪರ್ಶದ ತಾಣಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಲಾಗುವುದು. ಭದ್ರತಾ ಸಿಬ್ಬಂದಿ ಸೇರಿದಂತೆ ನಮ್ಮೆಲ್ಲ ಸಿಬ್ಬಂದಿ ಕೈ ಮತ್ತು ಮುಖಗವಸು ಧರಿಸಲಿದ್ದಾರೆ. ನಿಯಮಿತವಾಗಿ ಕೈಗಳನ್ನು ತೊಳೆದುಕೊಳ್ಳಲಿದ್ದಾರೆ. ಸಿಬ್ಬಂದಿಯ ಆರೋಗ್ಯ ತಪಾಸಣೆಗೆ ಥರ್ಮಾಮೀಟರ್ ಬಳಸಲಾಗುವುದು.

ಮಳಿಗೆಗಳಿಗೆ ಭೇಟಿ ನೀಡುವ ಗ್ರಾಹಕರ ವಿಳಾಸ ದಾಖಲಿಸಿಕೊಂಡು ಅವರು ಕಂಟೈನ್ಮೆಂಟ್ ವಲಯದಿಂದ ಬಂದಿಲ್ಲದಿರುವುದನ್ನು ಖಚಿತಪಡಿಸಿಕೊಳ್ಳಲಾಗುವುದು. ಗ್ರಾಹಕರ ಮಧ್ಯೆ ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು. ಪ್ರತಿಯೊಬ್ಬ ಗ್ರಾಹಕರ ವಹಿವಾಟು ಕೊನೆಗೊಂಡ ನಂತರ ಕೌಂಟರ್ಗಳನ್ನು ಸ್ವಚ್ಛಗೊಳಿಸಲಾಗುವುದು. ಕಾರ್ಡ್ ಮೂಲಕ ಹಣ ಪಾವತಿಸುವ ಸಂದರ್ಭದಲ್ಲಿ ಕಾರ್ಡ್ ಮತ್ತು ಸ್ವೈಪಿಂಗ್ ಯಂತ್ರವನ್ನು ಸ್ಯಾನಿಟೈಸ್ ಮಾಡಲಾಗುವುದು. ಗ್ರಾಹಕರ ಸುರಕ್ಷತೆಗೆ ನಮ್ಮ ಮೊದಲ ಆದ್ಯತೆಯಾಗಿದೆ ಎಂದೂ ಕಂಪನಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.