ಗುರುವಾರ , ಮಾರ್ಚ್ 23, 2023
32 °C

ಮಲಬಾರ್‌ ಗೋಲ್ಡ್‌: ಐದು ಸಾವಿರ ಹುದ್ದೆಗಳಿಗೆ ನೇಮಕಾತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಿನ್ನಾಭರಣಗಳ ಮಾರಾಟ ಕಂಪನಿಯಾಗಿರುವ ‘ಮಲಬಾರ್ ಗೋಲ್ಡ್ ಆ್ಯಂಡ್‌ ಡೈಮಂಡ್ಸ್‌’ ಐದು ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿರುವುದಾಗಿ ಹೇಳಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಕಂಪನಿಯ ಅಸ್ತಿತ್ವವನ್ನು ಚಿಲ್ಲರೆ ಮಾರಾಟ ಕ್ಷೇತ್ರದಲ್ಲಿ ಇನ್ನಷ್ಟು ಹೆಚ್ಚಿಸಲು ಈ ನೇಮಕಾತಿ ನಡೆಯಲಿದೆ ಎಂದು ಅದು ತಿಳಿಸಿದೆ.

ಶೇಕಡ 50ರಷ್ಟು ಹುದ್ದೆಗಳು ಅರ್ಹ ಮಹಿಳಾ ಅಭ್ಯರ್ಥಿಗಳಿಗೆ ಮೀಸಲಾಗಿವೆ ಎಂದು ಕಂಪನಿ ಹೇಳಿದೆ. ‘ಸರಿಯಾದ ಅರ್ಹತೆಗಳು ಇರುವವರನ್ನು ನೇಮಕ ಮಾಡಿಕೊಳ್ಳುವುದು, ಅವರಿಗೆ ಕಲಿಕೆ ಹಾಗೂ ಬೆಳವಣಿಗೆಗೆ ಅವಕಾಶ ಕಲ್ಪಿಸುವುದು ನಮ್ಮ ಪಾಲಿಗೆ ಯಾವತ್ತಿಗೂ ಆದ್ಯತೆಯ ಕೆಲಸಗಳು’ ಎಂದು ಮಲಬಾರ್ ಸಮೂಹದ ಅಧ್ಯಕ್ಷ ಎಂ.ಪಿ. ಅಹಮದ್ ಹೇಳಿದ್ದಾರೆ. ಆಸಕ್ತರು ಕಂಪನಿಯ ವೆಬ್‌ಸೈಟ್‌ (www.malabargroup.com/careers/) ಮೂಲಕ ಅರ್ಜಿ ಸಲ್ಲಿಸಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು