ಮಂಗಳೂರು: ಕರ್ನಾಟಕ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಈಚೆಗೆ 2026–27ನೇ ಸಾಲಿನ ಲೆಕ್ಕ ಪರಿಶೋಧಕರು ಹಾಗೂ ಆಂತರಿಕ ಲೆಕ್ಕ ಪರಿಶೋಧಕರ ವಾರ್ಷಿಕ ಸಮ್ಮೇಳನ ಆಯೋಜಿಸಲಾಗಿತ್ತು.

‘ಆ್ಯಂಟಿಸಿಪೇಟ್, ಸ್ಟ್ರೆಂತನ್ ಆ್ಯಂಡ್ ಪ್ರಿವೆಂಟ್’ ಎಂಬ ಘೋಷಣೆಯೊಂದಿಗೆ ಹೈಬ್ರಿಡ್ ಮಾದರಿಯಲ್ಲಿ ನಡೆದ ಈ ಸಮ್ಮೇಳನದಲ್ಲಿ, ದೇಶದ ವಿವಿಧ ಭಾಗಗಳಲ್ಲಿರುವ ಬ್ಯಾಂಕ್ನ ಲೆಕ್ಕ ಪರಿಶೋಧಕರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ಲೆಕ್ಕಪರಿಶೋಧನೆಯನ್ನು ಇನ್ನಷ್ಟು ಬಲಗೊಳಿಸುವುದು, ಅಪಾಯ ನಿರ್ವಹಣಾ ಸಾಮರ್ಥ್ಯ ಹೆಚ್ಚಿಸುವುದು, ನಿಯಂತ್ರಕ ನಿಯಮಾವಳಿಗಳ ಅನುಸರಣೆ ಖಚಿತಪಡಿಸುವುದು ಮತ್ತು ಆಂತರಿಕ ನಿಯಂತ್ರಣ ಮತ್ತು ಆಡಳಿತದಲ್ಲಿ ಸುಧಾರಣೆ ಕುರಿತು ಸಮ್ಮೇಳನದಲ್ಲಿ ಚರ್ಚೆಗಳು ನಡೆದವು.

ಲೆಕ್ಕಪರಿಶೋಧನಾ ಸಮಿತಿಯ ಅಧ್ಯಕ್ಷ ಕೆ. ಗುರುರಾಜ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಲೆಕ್ಕ ಪರಿಶೋಧಕ ಎಂ.ಆರ್. ವೆಂಕಟೇಶ್ ವಿಶೇಷ ಅತಿಥಿಯಾಗಿ ಮಾತನಾಡಿದರು. ಬ್ಯಾಂಕ್ನ ಎಂ.ಡಿ ಮತ್ತು ಸಿಇಒ ರಾಘವೇಂದ್ರ ಎಸ್ ಭಟ್ ಮಾತನಾಡಿದರು.

ಲೆಕ್ಕ ಪರಿಶೋಧಕ ನಂದನ ರಾವ್ ಇಡ್ಯ ಹಾಗೂ ಆಂತರಿಕ ಲೆಕ್ಕಪರಿಶೋಧನಾ ಮುಖ್ಯಸ್ಥ ಜಯನಾಗರಾಜ ರಾವ್ ಎಸ್. ಅವರು ಲೆಕ್ಕಪರಿಶೋಧನೆ ಕುರಿತ ವಿಚಾರಗಳ ಬಗ್ಗೆ ಮಾತನಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-29-1668682210

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.