ಮಂಗಳೂರು: ಕೇಂದ್ರ ಸರ್ಕಾರದ ಅಟಲ್ ಪಿಂಚಣಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ಗೆ (ಎಸ್ಸಿಡಿಸಿಸಿ ಬ್ಯಾಂಕ್) 2025- 26ನೇ ಸಾಲಿನ ಎಪಿವೈ ರಾಷ್ಟ್ರೀಯ ವಾರ್ಷಿಕ ಪ್ರಶಸ್ತಿ ಲಭಿಸಿದೆ. ಬ್ಯಾಂಕ್ ಸತತ ಐದನೇ ಬಾರಿಗೆ ಈ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

2025- 26ನೇ ಸಾಲಿಗೆ ಎಸ್ ಸಿಡಿಸಿಸಿ ಬ್ಯಾಂಕ್ ತನ್ನ 113 ಶಾಖೆಗಳಿಗೆ ಒಟ್ಟು 2260 ಚಂದಾದಾರರನ್ನು ನೊಂದಾಯಿಸುವ ಗುರಿ ನೀಡಿತ್ತು. ಈ ಗುರಿಯನ್ನು ಮೀರಿ, ಬ್ಯಾಂಕ್ ಒಟ್ಟು 3790 ಚಂದಾದಾರರನ್ನು ನೊಂದಾಯಿಸಿದೆ. ಈ ಸಾಧನೆಗಾಗಿ ಕೇಂದ್ರದ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಅಭಿನಂದಿಸಿ, ಎಪಿವೈ ವಾರ್ಷಿಕ ಪ್ರಶಸ್ತಿಯನ್ನು ನೀಡಿದೆ.

ನವದೆಹಲಿಯಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ಉಪ ಮಹಾಪ್ರಬಂಧಕಿಯರಾದ ಶರ್ಮಿಳಾ ಗಡಿಯಾರ್ ಮತ್ತು ವಿದ್ಯಾ ಕಾರ್ನಾಡ್ ಅವರು ಪ್ರಶಸ್ತಿ ಸ್ವೀಕರಿಸಿದ್ದು, ಶುಕ್ರವಾರ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಪ್ರಶಸ್ತಿ ಹಸ್ತಾಂತರಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಹಾಗೂ ಮಹಾಪ್ರಬಂಧಕ ಸುನಿಲ್ ಕುಮಾರ್ ಹೊಳ್ಳ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-29-1611150423

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.