ನವದೆಹಲಿ (ಪಿಟಿಐ): ತಮಿಳುನಾಡಿನ ಶ್ರೀಪೆರಂಬದೂರು ಬಳಿಯ ಸ್ಯಾಮ್ಸಂಗ್ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ತಯಾರಿಕಾ ಘಟಕದಲ್ಲಿ ನಡೆಯುತ್ತಿರುವ ಕಾರ್ಮಿಕರ ಸಮಸ್ಯೆ ಪರಿಹರಿಸಲು ತಮಿಳುನಾಡು ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಬೇಕಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಮನ್ಸುಖ್ ಮಾಂಡವೀಯ ಹೇಳಿದ್ದಾರೆ.