ಗುರುವಾರ , ಅಕ್ಟೋಬರ್ 24, 2019
21 °C

ತಯಾರಿಕಾ ವಲಯದ ಬೆಳವಣಿಗೆ ಮಂದಗತಿ

Published:
Updated:

ನವದೆಹಲಿ : ದೇಶದ ತಯಾರಿಕಾ ವಲಯದ ಚಟುವಟಿಕೆಯಲ್ಲಿ ಯಾವುದೇ ರೀತಿಯ ಚೇತರಿಕೆ ಕಂಡುಬಂದಿಲ್ಲ.

ದೇಶಿ ಮತ್ತು ಜಾಗತಿಕ ಮಟ್ಟದಲ್ಲಿ ಬೇಡಿಕೆ ಭಾರಿ ಪ್ರಮಾಣದಲ್ಲಿ ಇಳಿಮುಖವಾಗಿದೆ ಹೀಗಾಗಿ ಸೆಪ್ಟೆಂಬರ್‌ನಲ್ಲಿ ಮಂದಗತಿಯ ಬೆಳವಣಿಗೆ ಕಂಡಿದೆ ಎಂದು ಐಎಚ್‌ಎಸ್‌ ಮರ್ಕಿಟ್‌ ಇಂಡಿಯಾ ಸಂಸ್ಥೆ ತಿಳಿಸಿದೆ

ಮ್ಯಾನ್ಯುಫ್ಯಾಕ್ಚರಿಂಗ್‌ ಪರ್ಚೇಸಿಂಗ್‌ ಮ್ಯಾನೇಜರ್ಸ್‌ ಇಂಡೆಕ್ಸ್‌ (ಪಿಎಂಐ) ಸೆಪ್ಟೆಂಬರ್‌ನಲ್ಲಿ 51.4ರಷ್ಟಿದೆ. ಆಗಸ್ಟ್‌ನಲ್ಲಿಯೂ ಇಷ್ಟೇ ಇತ್ತು. ಇದು 2008ರ ಮೇ ತಿಂಗಳ ಬಳಿಕ ಅಂದರೆ 16 ತಿಂಗಳ ಕನಿಷ್ಠ ಮಟ್ಟವಾಗಿದೆ.

ತಯಾರಿಕಾ ವಲಯದ ಮಂದಗತಿಯ ಬೆಳವಣಿಗೆಯು ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿಯೂ ಮುಂದುವರಿದಿದೆ. ಇದು 2017ರ ನಂತರದ ಅತ್ಯಂತ ಕನಿಷ್ಠ ಮಟ್ಟದ್ದಾಗಿದೆ’ ಎಂದು ಐಎಚ್‌ಎಸ್‌ ಮರ್ಕಿಟ್‌ನ ಮುಖ್ಯ ಆರ್ಥಿಕ ತಜ್ಞ ಪಾಲಿಯಾನಾ ಡಿ ಲಿಮಾ ಹೇಳಿದ್ದಾರೆ.

ವಾಣಿಜ್ಯ ವಹಿವಾಟು ಚಟುವಟಿಕೆಯು ಎರಡೂವರೆ ವರ್ಷಗಳ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿದೆ. 

 

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)