ಶುಕ್ರವಾರ, ಫೆಬ್ರವರಿ 28, 2020
19 °C
ಮೂರು ವಹಿವಾಟಿನ ದಿನಗಳ ಓಟಕ್ಕೆ ತಡೆ

ಮಾರಾಟದ ಒತ್ತಡ: ಸೂಚ್ಯಂಕ ಇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ದೇಶದ ಷೇರುಪೇಟೆಗಳಲ್ಲಿನ ಮೂರು ದಿನಗಳ ಸೂಚ್ಯಂಕದ ಓಟಕ್ಕೆ ಬುಧವಾರ ತೆರೆ ಬಿದ್ದಿದೆ. ಲಾಭ ಗಳಿಕೆ ಉದ್ದೇಶದ ವಹಿವಾಟು ನಡೆದು ಸೂಚ್ಯಂಕಗಳು ಇಳಿಕೆ ಕಂಡಿವೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು (ಬಿಎಸ್‌ಇ) 247 ಅಂಶ ಇಳಿಕೆಯಾಗಿ 39,502 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಪ್ಟಿ 67 ಅಂಶ ಇಳಿಕೆ ಕಂಡು 11,861 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ಎರಡೂ ಸೂಚ್ಯಂಕಗಳು ಹಿಂದಿನ ಮೂರು ವಹಿವಾಟುಗಳಲ್ಲಿ ದಾಖಲೆ ಮಟ್ಟಕ್ಕೆ ಏರಿಕೆ ಕಂಡಿದ್ದವು.

10 ವರ್ಷಗಳ ಅವಧಿಯ ಅಮೆರಿಕದ ಬಾಂಡ್‌ಗಳ ಗಳಿಕೆಯು ಮೂರು ತಿಂಗಳ ದರಕ್ಕಿಂತಲೂ ಕೆಳಕ್ಕಿಳಿದಿದೆ. ಇದರ ಜತೆಗೆ ಅಮೆರಿಕ–ಚೀನಾ ವ್ಯಾಪಾರ ಮಾರುಕತೆಯಲ್ಲಿ ಯಾವುದೇ ಪ್ರಗತಿ ಕಾಣದೇ ಇರುವುದು ಸಹ ನಕಾರಾತ್ಮಕ ಚಲನೆಗೆ ಕಾರಣವಾಗಿದೆ.

ಎಸ್‌ಬಿಐ ಶೇ 3.29ರಷ್ಟು ಗರಿಷ್ಠ ನಷ್ಟ ಕಂಡಿದೆ. ಟಾಟಾ ಸ್ಟೀಲ್‌, ಐಸಿಐಸಿಐ ಬ್ಯಾಂಕ್‌ ಮತ್ತು ಮಾರುತಿ ಶೇ 2.76ರವರೆಗೂ ಏರಿಕೆ ಕಂಡಿವೆ.

ರೂಪಾಯಿ ಇಳಿಕೆ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯ 14 ಪೈಸೆ ಇಳಿಕೆಯಾಗಿ ಒಂದು ಡಾಲರ್‌ಗೆ ₹69.83ರಂತೆ ವಿನಿಮಯಗೊಂಡಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು