ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರು ದಿನಗಳ ಸೂಚ್ಯಂಕದ ಓಟಕ್ಕೆ ತಡೆ

Last Updated 10 ಜನವರಿ 2019, 20:00 IST
ಅಕ್ಷರ ಗಾತ್ರ

ಮುಂಬೈ: ಷೇರುಪೇಟೆಯಲ್ಲಿ ಮೂರು ದಿನಗಳ ಸೂಚ್ಯಂಕದ ಓಟಕ್ಕೆ ಗುರುವಾರ ತಡೆ ಬಿದ್ದಿದೆ. ಮಾರಾಟದ ಒತ್ತಡಕ್ಕೆ ಒಳಗಾಗಿ ವಹಿವಾಟು ಇಳಿಕೆ ಕಂಡಿದೆ.

ಜಾಗತಿಕ ಮಾರುಕಟ್ಟೆಗಳಲ್ಲಿನ ಮಂದಗತಿಯ ವಹಿವಾಟು ಹಾಗೂ ರೂಪಾಯಿ ಮೌಲ್ಯ ಇಳಿಕೆಯು ನಕಾರಾತ್ಮಕ ವಹಿವಾಟು ನಡೆಯುವಂತೆ ಮಾಡಿದೆ. ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು (ಬಿಎಸ್‌ಇ) 106 ಅಂಶ ಇಳಿಕೆಯಾಗಿ 36,106 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 34 ಅಂಶ ಇಳಿಕೆ ಕಂಡು 10,821 ಅಂಶಗಳಿಗೆ ತಲುಪಿದೆ.

ರೂಪಾಯಿ ಚೇತರಿಕೆ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಎರಡು ವಹಿವಾಟು ಅವಧಿಗಳಲ್ಲಿ ಇಳಿಮುಖವಾಗಿದ್ದ ರೂಪಾಯಿ ಮೌಲ್ಯ ಗುರುವಾರ ಅಲ್ಪ ಚೇತರಿಕೆ ಕಂಡಿತು.5 ಪೈಸೆ ಹೆಚ್ಚಾಗಿ ಒಂದು ಡಾಲರ್‌ಗೆ ₹ 70.41ರಂತೆ ವಿನಿಮಯಗೊಂಡಿತು.

ಹಿಂದಿನ ಎರಡು ವಹಿವಾಟು ಅವಧಿಗಳಲ್ಲಿ ರೂಪಾಯಿ ಮೌಲ್ಯ 78 ಪೈಸೆಗಳಷ್ಟು ಇಳಿಕೆಯಾಗಿತ್ತು.

ಅಮೆರಿಕದ ಫೆಡರಲ್‌ ರಿಸರ್ವ್‌ ಭವಿಷ್ಯದಲ್ಲಿ ಬಡ್ಡಿದರ ಏರಿಕೆ ಮಾಡುವ ಬಗ್ಗೆ ಅನಿಶ್ಚಿತತೆ ಮೂಡಿದೆ. ಇದರಿಂದಾಗಿ ಡಾಲರ್‌ ಮೌಲ್ಯ ಇಳಿಕೆ ಕಂಡಿದ್ದು, ರೂಪಾಯಿ ಮೌಲ್ಯದಲ್ಲಿ ಏರಿಕೆ ಕಾಣುವಂತಾಗಿದೆ ಎಂದು ವರ್ತಕರು ಹೇಳಿದ್ದಾರೆ. ಬ್ರೆಂಟ್ ಕಚ್ಚಾ ತೈಲ ದರ ಶೇ 0.80ರಷ್ಟು ಇಳಿಕೆಯಾಗಿ, ಒಂದು ಬ್ಯಾರೆಲ್‌ಗೆ 60.95 ಡಾಲರ್‌ಗಳಂತೆ ಮಾರಾಟವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT