ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆನ್ಸೆಕ್ಸ್: ವಾರದ ವಹಿವಾಟಿನಲ್ಲಿ 812 ಅಂಶ ಏರಿಕೆ

Last Updated 12 ಫೆಬ್ರುವರಿ 2021, 14:48 IST
ಅಕ್ಷರ ಗಾತ್ರ

ಮುಂಬೈ: ಜಾಗತಿಕ ಷೇರು ಮಾರುಕಟ್ಟೆಗಳಲ್ಲಿ ಉತ್ಸಾಹದ ವಹಿವಾಟು ಇಲ್ಲದಿದ್ದ ಪರಿಣಾಮವಾಗಿ, ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳು ಕೂಡ ಶುಕ್ರವಾರದ ವಹಿವಾಟಿನಲ್ಲಿ ಹೆಚ್ಚಿನ ಏರಿಕೆಯನ್ನು ಕಾಣಲಿಲ್ಲ.

ಬಿಎಸ್‌ಇ ಸೆನ್ಸೆಕ್ಸ್ 12 ಅಂಶ ಏರಿಕೆ ಕಂಡು, 51,544 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿತು. ನಿಫ್ಟಿ 10 ಅಂಶ ಇಳಿಕೆ ದಾಖಲಿಸಿ 15,163 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿತು.

ಈ ವಾರದ ಅವಧಿಯಲ್ಲಿ ಸೆನ್ಸೆಕ್ಸ್ ಒಟ್ಟು 812 ಅಂಶ ಏರಿಕೆ ಕಂಡಿದೆ. ನಿಫ್ಟಿ 239 ಅಂಶ ಏರಿಕೆ ದಾಖಲಿಸಿದೆ. ಶುಕ್ರವಾರದ ವಹಿವಾಟಿನಲ್ಲಿ ಐಸಿಐಸಿಐ ಬ್ಯಾಂಕ್‌ ಷೇರುಗಳು ಹೆಚ್ಚಿನ ಏರಿಕೆ ದಾಖಲಿಸಿದವು. ಎಕ್ಸಿಸ್ ಬ್ಯಾಂಕ್, ಇನ್ಫೊಸಿಸ್, ಎಚ್‌ಡಿಎಫ್‌ಸಿ, ಎಸ್‌ಬಿಐ, ಬಜಾಜ್‌ ಫಿನ್‌ಸರ್ವ್‌ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್‌ ಷೇರುಗಳು ಕೂಡ ಏರಿಕೆ ಕಂಡವು.

ಐಟಿಸಿ ಷೇರುಗಳು ದೊಡ್ಡ ಪ್ರಮಾಣದಲ್ಲಿ ಕುಸಿತ ಕಂಡವು. ಸನ್‌ ಫಾರ್ಮಾ, ಒಎನ್‌ಜಿಸಿ, ಭಾರ್ತಿ ಏರ್‌ಟೆಲ್‌, ಟೈಟಾನ್ ಮತ್ತು ಎನ್‌ಟಿಪಿಸಿ ಷೇರುಗಳು ಕೂಡ ಇಳಿಕೆ ದಾಖಲಿಸಿದವು.

ತೈಲ ಬೆಲೆ ಇಳಿಕೆ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆಯಲ್ಲಿ ಶೇಕಡ 0.72ರಷ್ಟು ಇಳಿಕೆ ಆಗಿದೆ. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 60.70 ಅಮೆರಿಕನ್‌ ಡಾಲರ್‌ನಂತೆ ಮಾರಾಟವಾಗಿದೆ. ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯದಲ್ಲಿ 12 ಪೈಸೆಯಷ್ಟು ಹೆಚ್ಚಳವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT