ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗರಿಷ್ಠ ಮಟ್ಟ ತಲುಪಿ ಕುಸಿದ ನಿಫ್ಟಿ

Published 24 ಮೇ 2024, 13:56 IST
Last Updated 24 ಮೇ 2024, 13:56 IST
ಅಕ್ಷರ ಗಾತ್ರ

ಮುಂಬೈ: ದೇಶದ ಷೇರು‍ಪೇಟೆಗಳಲ್ಲಿ ಶುಕ್ರವಾರ ನಡೆದ ಆರಂಭದ ವಹಿವಾಟಿನಲ್ಲಿ ಪ್ರಥಮ ಬಾರಿಗೆ 23 ಸಾವಿರ ಅಂಶದ ಗಡಿ ದಾಟಿ ದಾಖಲೆ ಬರೆದಿದ್ದ ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ, ದಿನದ ವಹಿವಾಟಿನ ಅಂತ್ಯದಲ್ಲಿ ಇಳಿಕೆ ಕಂಡಿತು.

ಬೆಳಿಗ್ಗಿನ ವಹಿವಾಟಿನಲ್ಲಿ ಎಫ್‌ಎಂಸಿಜಿ, ಐ.ಟಿ ಮತ್ತು ಹೆಲ್ತ್‌ಕೇರ್‌ ವಲಯದ ಷೇರುಗಳು ಮಾರಾಟದ ಒತ್ತಡಕ್ಕೆ ಸಿಲುಕಿದ್ದರಿಂದ ಏರಿಕೆ ಕಂಡಿದ್ದ ಷೇರು ಸೂಚ್ಯಂಕಗಳು, ನಂತರ ಇಳಿಕೆಯ ಹಾದಿ ಹಿಡಿದವು.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್‌ 7 ಅಂಶ ಇಳಿಕೆ ಕಂಡು 75,410ಕ್ಕೆ ಸ್ಥಿರಗೊಂಡಿತು. ವಹಿವಾಟಿನ ವೇಳೆ 75,636 ಅಂಶಕ್ಕೆ ಏರಿಕೆಯಾಗಿತ್ತು.

ನಿಫ್ಟಿ 10 ಅಂಶ ಕಡಿಮೆಯಾಗಿ 22,957ಕ್ಕೆ ಅಂತ್ಯಗೊಂಡಿತು. ದಿನದ ವಹಿವಾಟಿನಲ್ಲಿ 58 ಅಂಶ ಹೆಚ್ಚಳವಾಗಿ 23,026ಕ್ಕೆ ಮುಟ್ಟಿತ್ತು.

ಸೆನ್ಸೆಕ್ಸ್‌ ಗುಚ್ಛದಲ್ಲಿನ ಟೆಕ್‌ ಮಹೀಂದ್ರ, ಏಷ್ಯನ್‌ ಪೇಂಟ್ಸ್‌, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌, ಮಹೀಂದ್ರ ಆ್ಯಂಡ್‌ ಮಹೀಂದ್ರ, ಟೈಟನ್‌, ಜೆಎಸ್‌ಡಬ್ಲ್ಯು ಸ್ಟೀಲ್‌, ಐಟಿಸಿ ಷೇರಿನ ಮೌಲ್ಯ ಇಳಿಕೆ ಕಂಡಿದೆ. 

ಎಚ್‌ಡಿಎಫ್‌ಸಿ ಬ್ಯಾಂಕ್‌, ಭಾರ್ತಿ ಏರ್‌ಟೆಲ್‌, ಲಾರ್ಸೆನ್‌ ಆ್ಯಂಡ್‌ ಟೊಬ್ರೊ, ಎನ್‌ಟಿಪಿಸಿ, ಎಕ್ಸಿಸ್‌ ಬ್ಯಾಂಕ್‌ ಮತ್ತು ಅಲ್ಟ್ರಾಟೆಕ್‌ ಸಿಮೆಂಟ್‌ ಷೇರಿನ ಮೌಲ್ಯ ಇಳಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT