ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷೇರು ಮಾರುಕಟ್ಟೆ: ಮುಂದುವರಿದ ಚೇತರಿಕೆ

Last Updated 20 ಸೆಪ್ಟೆಂಬರ್ 2022, 15:45 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ವಿವಿಧ ದೇಶಗಳ ಕೇಂದ್ರೀಯ ಬ್ಯಾಂಕ್‌ಗಳು ಬಡ್ಡಿ ದರವನ್ನು ಇನ್ನಷ್ಟು ಹೆಚ್ಚಿಸಬಹುದು ಎಂಬ ಕಳವಳದ ನಡುವೆಯೂ ದೇಶದ ಷೇರು‍ಪೇಟೆ ಸೂಚ್ಯಂಕಗಳು ಮಂಗಳವಾರದ ವಹಿವಾಟಿನಲ್ಲಿ ಚೇತರಿಕೆ ಕಂಡವು.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 578 ಅಂಶ, ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 194 ಅಂಶ ಏರಿಕೆ ದಾಖಲಿಸಿದವು.

‘ಪಾಶ್ಚಿಮಾತ್ಯ ದೇಶಗಳ ಮಾರುಕಟ್ಟೆಗಳಲ್ಲಿನ ಅಸ್ಥಿರತೆಯು ಭಾರತದ ಮೇಲೆ ಪರಿಣಾಮ ಉಂಟುಮಾಡಲಿಲ್ಲ. ವಾಸ್ತವದಲ್ಲಿ, ಅಮೆರಿಕದ ಫೆಡರಲ್ ರಿಸರ್ವ್ ತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ಭಾರತದ ಮಾರುಕಟ್ಟೆಗಳು ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಮಾರುಕಟ್ಟೆಗಳು ಕುಸಿದಾಗಲೆಲ್ಲ ಹೆಚ್ಚು ಖರೀದಿಸಬೇಕು ಎಂಬುದನ್ನು ಈ ವಿದ್ಯಮಾನ ಸೂಚಿಸುತ್ತಿದೆ’ ಎಂದು ಜಿಯೋಜಿತ್ ಫೈನಾನ್ಶಿಯಲ್‌ ಸರ್ವಿಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

ಬಿಎಸ್‌ಇ ಮಿಡ್‌ಕ್ಯಾಪ್ ಸೂಚ್ಯಂಕ ಶೇ 1.65ರಷ್ಟು, ಸ್ಮಾಲ್‌ಕ್ಯಾಪ್ ಸೂಚ್ಯಂಕ ಶೇ 1.01ರಷ್ಟು ಏರಿಕೆ ಕಂಡಿದೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಮಂಗಳವಾರ ಒಟ್ಟು ₹ 1,196 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT