ಶನಿವಾರ, ಏಪ್ರಿಲ್ 10, 2021
32 °C

ಷೇರುಪೇಟೆಯಲ್ಲಿ ಮಾರಾಟದ ಒತ್ತಡ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಕೋವಿಡ್‌–19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು, ಚಿಲ್ಲರೆ ಹಣದುಬ್ಬರ ಏರಿಕೆ ಮತ್ತು ಕೈಗಾರಿಕಾ ಬೆಳವಣಿಗೆ ಇಳಿಕೆ ಆಗಿರುವ ಕಾರಣಗಳಿಂದಾಗಿ ದೇಶದ ಷೇರುಪೇಟೆಗಳಲ್ಲಿ ವಹಿವಾಟು ಇಳಿಕೆ ಕಂಡಿದೆ.

ಸೋಮವಾರದ ವಹಿವಾಟಿನ ಒಂದು ಹಂತದಲ್ಲಿ 1,036 ಅಂಶಗಳವರೆಗೆ ಇಳಿಕೆ ಕಂಡಿದ್ದ ಬಿಎಸ್‌ಇ ಸೆನ್ಸೆಕ್ಸ್‌ ನಂತರ ತುಸು ಚೇತರಿಸಿಕೊಂಡಿತು. ವಹಿವಾಟಿನ ಅಂತ್ಯದ ವೇಳೆಗೆ 397 ಅಂಶಗಳ ಇಳಿಕೆಯೊಂದಿಗೆ 50,395 ಅಂಶಗಳಲ್ಲಿ ವಹಿವಾಟು ಅಂತ್ಯವಾಯಿತು.

ಬ್ಯಾಂಕಿಂಗ್ ಮತ್ತು ಹಣಕಾಸು ವಲಯದ ಷೇರುಗಳ ಬೆಲೆ ಇಳಿಕೆ ಕಂಡಿದೆ.

ದೇಶದ ವಿವಿಧ ಭಾಗಗಳಲ್ಲಿ ಕೋವಿಡ್‌–19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಹಾಗೂ ಬಾಂಡ್‌ ಗಳಿಕೆ ಹೆಚ್ಚಳದಿಂದಾಗಿ ಸತತ ಎರಡನೇ ದಿನವೂ ದೇಶಿ ಷೇರುಪೇಟೆಗಳು ಇಳಿಕೆ ಕಂಡವು ಎಂದು ರಿಲಯನ್ಸ್‌ ಸೆಕ್ಯುರಿಟೀಸ್‌ನ ಯೋಜನಾ ಮುಖ್ಯಸ್ಥ ವಿನೋದ್‌ ಮೋದಿ ಹೇಳಿದ್ದಾರೆ.

ರೂಪಾಯಿ ಮೌಲ್ಯ ವೃದ್ಧಿ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ 33 ಪೈಸೆ ಹೆಚ್ಚಾಗಿ ಒಂದು ಡಾಲರ್‌ಗೆ ₹ 72.46ರಂತೆ ವಿನಿಮಯಗೊಂಡಿತು. ಇದು ಎರಡು ವಾರಗಳ ಗರಿಷ್ಠ ಮಟ್ಟವಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು