ಮುಂಬೈ: ಆಟೊ ಷೇರುಗಳ ಖರೀದಿ ಹೆಚ್ಚಳದಿಂದಾಗಿ ದೇಶದ ಷೇರುಪೇಟೆಯಲ್ಲಿ ಗುರುವಾರ ನಡೆದ ವಹಿವಾಟಿನಲ್ಲಿ ಸೂಚ್ಯಂಕಗಳು ಹೊಸ ಎತ್ತರಕ್ಕೆ ಜಿಗಿದಿವೆ.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 666 ಅಂಶ ಏರಿಕೆ ಕಂಡು 85,836 ಅಂಶಗಳಲ್ಲಿ ಅಂತ್ಯಗೊಂಡಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 211 ಅಂಶ ಹೆಚ್ಚಳ ಕಂಡು 26,216 ಅಂಶಗಳಲ್ಲಿ ಸ್ಥಿರಗೊಂಡಿತು.
ಸೆನ್ಸೆಕ್ಸ್ ಗುಚ್ಛದಲ್ಲಿ ಮಾರುತಿ ಸುಜುಕಿ ಷೇರಿನ ಮೌಲ್ಯದಲ್ಲಿ ಶೇ 5ರಷ್ಟು ಏರಿಕೆಯಾಗಿದೆ. ಟಾಟಾ ಮೋಟರ್ಸ್, ಬಜಾಜ್ ಫಿನ್‌ಸರ್ವ್, ಮಹೀಂದ್ರ ಆ್ಯಂಡ್ ಮಹೀಂದ್ರ, ಟಾಟಾ ಸ್ಟೀಲ್, ಅಲ್ಟ್ರಾಟೆಕ್ ಸಿಮೆಂಟ್, ಬಜಾಜ್ ಫೈನಾನ್ಸ್ ಮತ್ತು ನೆಸ್ಲೆ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.
ಎಲ್ ಆ್ಯಂಡ್ ಟಿ ಮತ್ತು ಎನ್‌ಟಿಪಿಸಿ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ. ಸೋಲ್, ಟೋಕಿಯೊ, ಶಾಂಘೈ ಮತ್ತು ಹಾಂಗ್‌ಕಾಂಗ್ ಮಾರುಕಟ್ಟೆಯಲ್ಲಿ ಸಕಾರಾತ್ಮಕ ವಹಿವಾಟು ನಡೆದಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾತೈಲದ ಬೆಲೆಯಲ್ಲಿ ಶೇ 1.80ರಷ್ಟು ಇಳಿಕೆಯಾಗಿದೆ. ಪ್ರತಿ ಬ್ಯಾರೆಲ್‌ಗೆ 72.14 ಡಾಲರ್ ಆಗಿದೆ.