ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆನ್ಸೆಕ್ಸ್: ಎಂಟನೆಯ ದಿನವೂ ಗಳಿಕೆ ವಹಿವಾಟು

Last Updated 1 ಡಿಸೆಂಬರ್ 2022, 16:01 IST
ಅಕ್ಷರ ಗಾತ್ರ

ಮುಂಬೈ: ದೇಶದ ಷೇರುಪೇಟೆಗಳಲ್ಲಿ ಗೂಳಿಯ ಓಟ ಮುಂದುವರಿದಿದೆ. ಮುಂಬೈ ಷೇರುಪೇಟೆ ಮತ್ತು ರಾಷ್ಟ್ರೀಯ ಷೇರುಪೇಟೆಯಲ್ಲಿ ಸತತ ಎಂಟನೆಯ ದಿನವೂ ಏರಿಕೆಯ ವಹಿವಾಟು ನಡೆದಿದೆ. ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ ಗುರುವಾರ ದಾಖಲೆಯ ಮಟ್ಟದಲ್ಲಿ ವಹಿವಾಟು ಕೊನೆಗೊಳಿಸಿವೆ.

ಪಿಎಂಐ ಸೂಚ್ಯಂಕವು ತಯಾರಿಕಾ ವಲಯದಲ್ಲಿ ಬೆಳವಣಿಗೆ ಆಗಿರುವುದನ್ನು ಸೂಚಿಸಿರುವುದು ಹಾಗೂ ಐ.ಟಿ. ವಲಯದ ಷೇರುಗಳಲ್ಲಿ ಹೂಡಿಕೆ ಹೆಚ್ಚಿದ್ದುದು ಸೂಚ್ಯಂಕಗಳ ಏರಿಕೆಗೆ ನೆರವಾಗಿವೆ. ಸೆನ್ಸೆಕ್ಸ್ 184 ಅಂಶ ಏರಿಕೆಯಾಗಿ 63,284 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿದೆ. ನಿಫ್ಟಿ 54 ಅಂಶ ಏರಿಕೆ ಕಂಡು 18,812 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿದೆ.

‘ಅಮೆರಿಕದ ಫೆಡರಲ್ ರಿಸರ್ವ್‌ನ ಮುಖ್ಯಸ್ಥ ಜೆರೋಮ್ ಪೊವೆಲ್ ಅವರು, ಬಡ್ಡಿ ದರ ಏರಿಕೆಯನ್ನು ಕಡಿಮೆ ಪ್ರಮಾಣದಲ್ಲಿ ಮಾಡುವುದು ಸೂಕ್ತ ಎಂದು ಹೇಳಿರುವುದು ಮಾರುಕಟ್ಟೆಯಲ್ಲಿ ತೇಜಿ ವಹಿವಾಟಿಗೆ ಕಾರಣವಾಗಿದೆ’ ಎಂದು ಜಿಯೋಜಿತ್ ಫೈನಾನ್ಶಿಯಲ್‌ ಸರ್ವಿಸಸ್‌ನ ಮುಖ್ಯ ಹೂಡಿಕೆ ತಜ್ಞ ವಿ.ಕೆ. ವಿಜಯಕುಮಾರ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT