ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಧನ, ಮೂಲಸೌಕರ್ಯ, ಐ.ಟಿ. ಷೇರುಗಳ ಗಳಿಕೆ: ಷೇರುಪೇಟೆ ವಹಿವಾಟು ಚೇತರಿಕೆ

Last Updated 7 ಜನವರಿ 2022, 15:33 IST
ಅಕ್ಷರ ಗಾತ್ರ

ಮುಂಬೈ: ಇಂಧನ, ಮೂಲಸೌಕರ್ಯ ಮತ್ತು ಐ.ಟಿ. ವಲಯದ ಷೇರುಗಳು ಉತ್ತಮ ಗಳಿಕೆ ಕಂಡಿದ್ದರಿಂದ ದೇಶದ ಷೇರುಪೇಟೆಗಳು ಶುಕ್ರವಾರ ಏರಿಕೆಯ ಹಾದಿಗೆ ಮರಳಿವೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ 142 ಅಂಶ ಹೆಚ್ಚಾಗಿ 59,744 ಅಂಶಗಳಲ್ಲಿ ವಹಿವಾಟು ಅಂತ್ಯವಾಯಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 66 ಅಂಶ ಹೆಚ್ಚಾಗಿ 17,812 ಅಂಶಗಳಿಗೆ ತಲುಪಿತು.

ಜಾಗತಿಕ ಷೇರುಪೇಟೆಗಳಲ್ಲಿ ಕಂಡುಬಂದ ಇಳಿಮುಖ ವಹಿವಾಟಿನಿಂದಾಗಿ ದೇಶಿ ಷೇರುಪೇಟೆ ಸೂಚ್ಯಂಕಗಳು ಆರಂಭದಲ್ಲಿ ಇಳಿಕೆ ಕಂಡವು. ಆರೋಗ್ಯಸೇವೆ ಮತ್ತು ಗ್ರಾಹಕ ಬಳಕೆ ವಸ್ತುಗಳನ್ನು ಮಾರಾಟ ಮಾಡುವ ಕಂಪನಿಗಳ ಷೇರುಗಳು ಸೂಚ್ಯಂಕಗಳ ಏರಿಕೆಗೆ ನೆರವಾದವು ಎಂದು ಜಿಯೋಜಿತ್‌ ಫೈನಾನ್ಶಿಯಲ್ ಸರ್ವಿಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್‌ ನಾಯರ್ ಹೇಳಿದ್ದಾರೆ.

ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯವು 12 ಪೈಸೆ ಹೆಚ್ಚಾಗಿ ಒಂದು ಡಾಲರ್‌ಗೆ ₹ 74.41ರಂತೆ ವಿನಿಮಯಗೊಂಡಿತು. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರವು ಶೇ 0.99ರಷ್ಟು ಹೆಚ್ಚಾಗಿ ಒಂದು ಬ್ಯಾರಲ್‌ಗೆ 82.80 ಡಾಲರ್‌ಗಳಿಗೆ ತಲುಪಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT