ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆನ್ಸೆಕ್ಸ್‌ 383 ಅಂಶ ಇಳಿಕೆ

Published 7 ಮೇ 2024, 16:03 IST
Last Updated 7 ಮೇ 2024, 16:03 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಆರಂಭಿಕ ವಹಿವಾಟಿನಲ್ಲಿ ಏರಿಕೆ ಕಂಡಿದ್ದ ಷೇರು ಸೂಚ್ಯಂಕಗಳು, ನಂತರದ ವಹಿವಾಟಿನಲ್ಲಿ ಮಾರಾಟದ ಒತ್ತಡಕ್ಕೆ ಸಿಲುಕಿದ್ದರಿಂದ ಮಂಗಳವಾರ ಇಳಿಕೆ ಕಂಡಿವೆ.

ಮುಂಬೈ ಷೇರುಪೇಟೆ ಸೂಚ್ಯಂಕ (ಬಿಎಸ್‌ಇ) ಸೆನ್ಸೆಕ್ಸ್‌ 383 ಅಂಶ ಇಳಿಕೆಯಾಗಿ 73,511ಕ್ಕೆ ಸ್ಥಿರಗೊಂಡಿದೆ. ವಹಿವಾಟಿನ ವೇಳೆ ಸೆನ್ಸೆಕ್ಸ್‌ 636 ಅಂಶಗಳವರೆಗೂ ಕುಸಿದಿತ್ತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 140 ಅಂಶ ಕಡಿಮೆಯಾಗಿ 22,302ಕ್ಕೆ ಅಂತ್ಯಗೊಂಡಿದೆ.

ಸೆನ್ಸೆಕ್ಸ್‌ ಗುಚ್ಛದಲ್ಲಿ ಪವರ್‌ಗ್ರಿಡ್‌, ಇಂಡಸ್‌ಇಂಡ್‌ ಬ್ಯಾಂಕ್‌, ಟಾಟಾ ಮೋಟರ್ಸ್‌, ಜೆಎಸ್‌ಡಬ್ಲ್ಯು ಸ್ಟೀಲ್‌, ಎನ್‌ಟಿಪಿಸಿ ಟೆಕ್ನಾಲಜೀಸ್‌, ಟಾಟಾ ಸ್ಟೀಲ್‌, ಐಸಿಐಸಿಐ ಬ್ಯಾಂಕ್‌, ಮಹೀಂದ್ರ ಆ್ಯಂಡ್‌ ಮಹೀಂದ್ರ, ಎಕ್ಸಿಸ್‌ ಬ್ಯಾಂಕ್‌, ಎಚ್‌ಡಿಎಫ್‌ಸಿ ಬ್ಯಾಂಕ್‌ ಮತ್ತು ರಿಲಯನ್ಸ್‌ ಇಂಡಸ್ಟ್ರೀಸ್‌ ಷೇರಿನ ಮೌಲ್ಯ ಇಳಿಕೆ ಆಗಿದೆ.

ಹಿಂದೂಸ್ತಾನ್‌ ಯೂನಿಲಿವರ್‌, ಟೆಕ್‌ ಮಹೀಂದ್ರ, ನೆಸ್ಲೆ, ಐಟಿಸಿ, ವಿಪ್ರೊ, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ ಮತ್ತು ಕೋಟಕ್‌ ಮಹೀಂದ್ರ ಬ್ಯಾಂಕ್‌ನ ಷೇರಿನ ಮೌಲ್ಯ ಏರಿಕೆಯಾಗಿದೆ.

ಏಷ್ಯನ್‌ ಮಾರುಕಟ್ಟೆಯಲ್ಲಿ ಸೋಲ್‌, ಟೋಕಿಯೊ ಮತ್ತು ಶಾಂಘೈ ಸಕಾರಾತ್ಮಕ ವಹಿವಾಟಿನಲ್ಲಿ ಅಂತ್ಯಗೊಂಡಿದ್ದರೆ, ಹಾಂಗ್‌ಕಾಂಗ್‌ ಇಳಿಕೆ ಕಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT