ಮುಂಬೈ: ಸತತ ಐದು ದಿನಗಳಿಂದ ಕುಸಿತ ಕಂಡಿದ್ದ ದೇಶದ ಷೇರುಪೇಟೆಯು ಸೋಮವಾರದ ವಹಿವಾಟಿನಲ್ಲಿ ಚೇತರಿಕೆ ಕಂಡಿದೆ.

ಐಟಿಸಿ, ಎಚ್ಡಿಎಫ್ಸಿ ಬ್ಯಾಂಕ್ ಹಾಗೂ ರಿಲಯನ್ಸ್ ಇಂಡಸ್ಟ್ರಿಸ್ ಷೇರುಗಳ ಖರೀದಿ ಹೆಚ್ಚಳವು ಸೂಚ್ಯಂಕಗಳ ಏರಿಕೆಗೆ ನೆರವಾಯಿತು.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 498 ಅಂಶ ಏರಿಕೆ ಕಂಡು, 78,540 ಅಂಶಗಳಲ್ಲಿ ಸ್ಥಿರಗೊಂಡಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 165 ಅಂಶ ಏರಿಕೆ ಕಂಡು, 23,753 ಅಂಶಗಳಲ್ಲಿ ವಹಿವಾಟು ಮುಕ್ತಾಯಗೊಂಡಿತು.

ಸೆನ್ಸೆಕ್ಸ್ ಗುಚ್ಛದಲ್ಲಿನ ಐಟಿಸಿ, ಟೆಕ್ ಮಹೀಂದ್ರ, ಎಚ್ಡಿಎಫ್ಸಿ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರಿಸ್, ಇಂಡಸ್ ಇಂಡ್ ಬ್ಯಾಂಕ್, ಟೈಟನ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಐಸಿಐಸಿಐ ಬ್ಯಾಂಕ್ನ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ. ಜೊಮಾಟೊ, ಮಾರುತಿ, ಎಚ್ಸಿಎಲ್ ಟೆಕ್, ಬಜಾಜ್ ಫಿನ್ಸರ್ವ್, ಟಾಟಾ ಮೋಟರ್ಸ್ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ.

ಸೋಲ್, ಟೋಕಿಯೊ, ಹಾಂಗ್ಕಾಂಗ್ ಮಾರುಕಟ್ಟೆಗಳು ಏರಿಕೆ ಕಂಡಿದ್ದರೆ, ಶಾಂಘೈ ಮಾರುಕಟ್ಟೆ ಇಳಿಕೆ ಕಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.