ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರುತಿ ಸುಜುಕಿ ಲಾಭ ಇಳಿಕೆ

Last Updated 27 ಅಕ್ಟೋಬರ್ 2021, 11:04 IST
ಅಕ್ಷರ ಗಾತ್ರ

ನವದೆಹಲಿ: ಕಾರು ತಯಾರಿಕಾ ವಲಯದಲ್ಲಿನ ದೇಶದ ಅತಿದೊಡ್ಡ ಕಂಪನಿಯಾಗಿರುವ ಮಾರುತಿ ಸುಜುಕಿ ಸೆಪ್ಟೆಂಬರ್‌ಗೆ ಕೊನೆಗೊಂಡ ತ್ರೈಮಾಸಿಕದ ನಿವ್ವಳ ಲಾಭದಲ್ಲಿ ಶೇಕಡ 66ರಷ್ಟು ಇಳಿಕೆ ದಾಖಲಿಸಿದೆ. ಸೆಮಿಕಂಡಕ್ಟರ್ ಕೊರತೆಯ ಕಾರಣದಿಂದಾಗಿ ಕಾರು ತಯಾರಿಕೆ ಮೇಲೆ ಪರಿಣಾಮ ಉಂಟಾಗಿದ್ದು, ಕಂಪನಿಯು ₹ 487 ಕೋಟಿ ನಿವ್ವಳ ಲಾಭ ಗಳಿಸಿದೆ.

ಅಗತ್ಯ ವಸ್ತುಗಳ ಬೆಲೆಯಲ್ಲಿ ಆದ ಹೆಚ್ಚಳ ಕೂಡ ಕಂಪನಿಯ ಗಳಿಕೆಯ ಮೇಲೆ ಕೆಟ್ಟ ಪರಿಣಾಮ ಉಂಟುಮಾಡಿದೆ. ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಕಂಪನಿಯು ಒಟ್ಟು ₹ 1,420 ಕೋಟಿ ಲಾಭ ಗಳಿಸಿತ್ತು. ಈ ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಕಂಪನಿಯ ಒಟ್ಟು ಆದಾಯ ₹ 20,551 ಕೋಟಿ ಆಗಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ಕಂಪನಿಯು ₹ 18,756 ಕೋಟಿ ಆದಾಯ ಗಳಿಸಿತ್ತು.

ಕಂಪನಿಯ ವಾಹನಗಳ ಮಾರಾಟದಲ್ಲಿ ಶೇಕಡ 3ರಷ್ಟು ಇಳಿಕೆ ಕಂಡುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT