ನವದೆಹಲಿ (ಪಿಟಿಐ): ದೇಶದ ಕಾರು ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಇಂಡಿಯಾ ಕಂಪನಿಯ ಪಾಲು ಏಪ್ರಿಲ್ ತಿಂಗಳಿನಲ್ಲಿ ಶೇ 42ಕ್ಕೆ ಹೆಚ್ಚಳವಾಗಿದೆ.

ಮಾರುತಿ ಸುಜುಕಿಯು, ದೇಶದ ಅತಿದೊಡ್ಡ ಕಾರು ತಯಾರಿಕಾ ಕಂಪನಿಯಾಗಿದೆ.

ಕಳೆದ ಆರ್ಥಿಕ ವರ್ಷದ ಇದೇ ತಿಂಗಳಿನಲ್ಲಿ ಕಂಪನಿಯ ಮಾರುಕಟ್ಟೆ ಪಾಲು ಶೇ 39ರಷ್ಟಿತ್ತು. ಏಪ್ರಿಲ್ ತಿಂಗಳಿನಲ್ಲಿ ದೇಶೀಯವಾಗಿ ಕಂಪನಿಯ 1.91 ಲಕ್ಷ ಕಾರುಗಳು ಮಾರಾಟವಾಗಿದೆ. ಹೀಗಾಗಿ ಕಂಪನಿಯ ಪಾಲು ಶೇ 3ರಷ್ಟು ಹೆಚ್ಚಳವಾಗಿದೆ.

‘ಪ್ರಯಾಣಿಕ ವಾಹನಗಳ ಮಾರಾಟದಲ್ಲಿನ ಹೆಚ್ಚಳವು ಕಂಪನಿಯ ಮಾರುಕಟ್ಟೆ ಪಾಲು ಏರಿಕೆಗೆ ಕಾರಣ’ ಎಂದು ಮಾರುತಿ ಸುಜುಕಿ ಇಂಡಿಯಾದ ಮಾರುಕಟ್ಟೆ ಮತ್ತು ಮಾರಾಟ ವಿಭಾಗದ ಹಿರಿಯ ಕಾರ್ಯನಿರ್ವಾಹಕ ಅಧಿಕಾರಿ ಪಾರ್ಥೊ ಬ್ಯಾನರ್ಜಿ ಹೇಳಿದ್ದಾರೆ.

ಕಳೆದ ವರ್ಷದ ಏಪ್ರಿಲ್ನಲ್ಲಿ ಕಂಪನಿಯ 68,244 ಕಾರುಗಳು ಮಾರಾಟವಾಗಿದ್ದವು. ಅದು ಈ ಬಾರಿ 96,725ಕ್ಕೆ ಏರಿಕೆಯಾಗಿದೆ. ಎಸ್ಯುವಿ ಮಾರಾಟದಲ್ಲಿ ಶೇ 141ರಷ್ಟು ಜಿಗಿತವಾಗಿದ್ದು, 55,065 ವಾಹನಗಳು ಮಾರಾಟವಾಗಿವೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-51-1678907827

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.