ಗುರುವಾರ , ಜೂನ್ 4, 2020
27 °C

ಮಾರುತಿ: 5 ಸಾವಿರ ಕಾರು ಮಾರಾಟ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಾದ್ಯಂತ ಇರುವ 1,350ಕ್ಕೂ ಅಧಿಕ ಮಳಿಗೆಗಳಲ್ಲಿ ಇತ್ತೀಚಿನ ಕೆಲವೇ ದಿನಗಳಲ್ಲಿ 5 ಸಾವಿರ ಕಾರ್‌ಗಳನ್ನು ಮಾರಾಟ ಮಾಡಲಾಗಿದೆ ಎಂದು ಮಾರುತಿ ಸುಜುಕಿ ಇಂಡಿಯಾ ತಿಳಿಸಿದೆ.

ಕಾರು ಖರೀದಿ ಪ್ರಕ್ರಿಯೆಯು ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎನ್ನುವುದನ್ನು ಖಾತರಿಪಡಿಸಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಿರುವ ಮಾರ್ಗದರ್ಶನಗಳ ಆಧಾರದ ಮೇಲೆ ಸುರಕ್ಷತೆಗೆ ಗಮನ ನೀಡಲಾಗಿದೆ ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಕೆನೆಚಿ ಅಯಕುವಾ ತಿಳಿಸಿದ್ದಾರೆ.

ಕಿಯಾ ಕಾರ್ಯಾಚರಣೆ: ಕಿಯಾ ಮೋಟರ್ಸ್ ಕಂಪನಿಯು ಅನಂತಪುರದಲ್ಲಿನ ಘಟಕದಲ್ಲಿ ಕಾರ್ಯಾಚರಣೆ ಆರಂಭಿಸಿರುವುದಾಗಿ ತಿಳಿಸಿದೆ.

ಸಿಬ್ಬಂದಿಯ ಸುರಕ್ಷತೆಗೆ ಅಗತ್ಯವಾದ ಎಲ್ಲಾ ಕ್ರಮಗಳನ್ನೂ ತೆಗೆದುಕೊಳ್ಳಲಾಗಿದೆ. ಸದ್ಯಕ್ಕೆ ಒಂದು ಪಾಳಿಯಲ್ಲಿ ಕೆಲಸ ನಡೆಯುತ್ತಿದೆ. ಕೋವಿಡ್‌–19 ಪರಿಸ್ಥಿತಿಯಿಂದ ದೇಶವು ಸಂಪೂರ್ಣವಾಗಿ ಹೊರಬಂದ ಬಳಿಕ ಪೂರ್ಣ ಪ್ರಮಾಣದಲ್ಲಿ ಸಿಬ್ಬಂದಿ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು