ಮಂಗಳವಾರ, ಸೆಪ್ಟೆಂಬರ್ 29, 2020
22 °C

ಮಾರುತಿ ಸುಜುಕಿ ನಷ್ಟ ₹ 268 ಕೋಟಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ (ಎಂಎಸ್‌ಐ) ಕಂಪನಿಯು ಹದಿನೇಳು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ತ್ರೈಮಾಸಿಕವೊಂದರಲ್ಲಿ ನಷ್ಟ ಅನುಭವಿಸಿದೆ. ಜೂನ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಕಂಪನಿಯು ಒಟ್ಟು ₹ 268.3 ಕೋಟಿ ನಷ್ಟ ದಾಖಲಿಸಿದೆ. ಕೊರೊನಾ ವೈರಾಣು ನಿಗ್ರಹಿಸುವ ಉದ್ದೇಶದಿಂದ ಜಾರಿಗೊಳಿಸಿದ ನಷ್ಟಕ್ಕೆ ಲಾಕ್‌ಡೌನ್‌ ಮುಖ್ಯ ಕಾರಣ.

ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಕಂಪನಿಯು ಒಟ್ಟು ₹ 1,376.8 ಕೋಟಿ ಲಾಭ ಗಳಿಸಿತ್ತು. ವರ್ಷದ ಮೊದಲ ತ್ರೈಮಾಸಿಕದಲ್ಲಿ ಕಂಪನಿಯ ಒಟ್ಟು 76,599 ವಾಹನಗಳನ್ನು ಮಾರಾಟ ಮಾಡಿದೆ. ಈ ಪೈಕಿ 9,572 ವಾಹನಗಳು ಹೊರದೇಶಗಳಿಗೆ ರಫ್ತಾಗಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು