ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರುತಿ ಸುಜುಕಿ ಲಾಭ ಶೇ 51ರಷ್ಟು ಹೆಚ್ಚಳ

2021–22ರ ನಾಲ್ಕನೇ ತ್ರೈಮಾಸಿಕದ ಆರ್ಥಿಕ ಸಾಧನೆ
Last Updated 29 ಏಪ್ರಿಲ್ 2022, 11:15 IST
ಅಕ್ಷರ ಗಾತ್ರ

ನವದೆಹಲಿ: ಮಾರುತಿ ಸುಜುಕಿ ಇಂಡಿಯಾ ಕಂಪ‍ನಿಯು 2022ರ ಮಾರ್ಚ್‌ 31ಕ್ಕೆ ಕೊನೆಗೊಂಡ ನಾಲ್ಕನೇ ತ್ರೈಮಾಸಿಕದಲ್ಲಿ ₹ 1,875 ಕೋಟಿ ನಿವ್ವಳ ಲಾಭ ಗಳಿಸಿದೆ.

2021ರ ಮಾರ್ಚ್‌ 31ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಕಂಪನಿಯು ₹ 1,241 ಕೋಟಿ ನಿವ್ವಳ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಲಾಭವು ಶೇಕಡ 51ರಷ್ಟು ಹೆಚ್ಚಾಗಿದೆ ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ.

ಕಾರ್ಯಾಚರಣೆ ವರಮಾನವು ₹ 24,034 ಕೋಟಿಯಿಂದ ₹ 26,749 ಕೋಟಿಗೆ ಏರಿಕೆ ಆಗಿದೆ. ತ್ರೈಮಾಸಿಕ ಅವಧಿಯಲ್ಲಿ ಕಂಪನಿಯು ಒಟ್ಟಾರೆ 4.88 ಲಕ್ಷ ವಾಹನಗಳನ್ನು ಮಾರಾಟ ಮಾಡಿದ್ದು, ಹಿಂದಿನ ಅವಧಿಗೆ ಹೋಲಿಸಿದರೆ ಶೇ 0.7ರಷ್ಟು ಇಳಿಕೆ ಆಗಿದೆ.

2021–22ನೇ ಹಣಕಾಸು ವರ್ಷದಲ್ಲಿ ₹ 3,879 ಕೋಟಿ ನಿವ್ವಳ ಲಾಭ ಗಳಿಸಿದ್ದು, ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ಲಾಭವು ಶೇ 11.6ರಷ್ಟು ಹೆಚ್ಚಾಗಿದೆ. ಕಂಪನಿಯ ಒಟ್ಟಾರೆ ವರಮಾನ ₹ 70,372 ಕೋಟಿಯಿಂದ ₹ 88,329 ಕೋಟಿಗೆ ಏರಿಕೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT